ETV Bharat / state

ಮಂಗಳಾದೇವಿ ಜಾತ್ರೆ: ಉಳಿದ ಮಳಿಗೆಗಳು ನಾಳೆ ಬೆಳಗ್ಗೆ ಬಹಿರಂಗ ಹರಾಜು

author img

By ETV Bharat Karnataka Team

Published : Oct 13, 2023, 9:25 PM IST

ಬೀದಿಬದಿ ಮತ್ತು ಜಾತ್ರೆ ವ್ಯಾಪಾರಸ್ಥರ ಸಂಘದ ಪ್ರಮುಖರು ಸಲ್ಲಿಸಿದ ಮನವಿಗೆ ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸ್ಪಂದಿಸಿದ್ದಾರೆ.

ಮಂಗಳಾದೇವಿ ಜಾತ್ರೆ
ಮಂಗಳಾದೇವಿ ಜಾತ್ರೆ

ಮಂಗಳೂರು (ದಕ್ಷಿಣ ಕನ್ನಡ) : ಮಂಗಳಾದೇವಿ ನವರಾತ್ರಿ ಉತ್ಸವದಲ್ಲಿ ಅನ್ಯಧರ್ಮಿಯ ವ್ಯಾಪಾರಿಗಳಿಗೆ ಅನ್ಯಾಯವಾಗಿರುವ ವಿಚಾರದಲ್ಲಿ ಮಧ್ಯಪ್ರವೇಶಿಸಿರುವ ಜಿಲ್ಲಾಡಳಿತ ಏಲಂ ಆಗದೇ ಉಳಿದಿರುವ ಇತರ ಮಳಿಗೆಗಳಿಗೆ ನಾಳೆ ಬೆಳಗ್ಗೆ ಬಹಿರಂಗ ಹರಾಜು ಮಾಡುವಂತೆ ದೇವಸ್ಥಾನಕ್ಕೆ ಸೂಚಿಸಿದೆ. ಬೀದಿಬದಿ ಮತ್ತು ಜಾತ್ರೆ ವ್ಯಾಪಾರಸ್ಥರ ಸಂಘದ ಪ್ರಮುಖರು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಜಿ.ಸಂತೋಷ್ ಕುಮಾರ್ ಅವರಿಗೆ ತಮಗಾಗಿರುವ ಅನ್ಯಾಯದ ಬಗ್ಗೆ ಮನವಿ ಸಲ್ಲಿಸಿದರು.

ಹೀಗಾಗಿ ದೇವಸ್ಥಾನ ಆಡಳಿತ ಮಂಡಳಿಯನ್ನು ಕರೆಸಿದ ಅಪರ ಜಿಲ್ಲಾಧಿಕಾರಿಗಳು ಏಲಂ ಆಗದೇ ಉಳಿದಿರುವ ಮಳಿಗೆಗಳಿಗೆ ನಾಳೆ ಬೆಳಿಗ್ಗೆ ಬಹಿರಂಗ ಹರಾಜು ಮಾಡುವಂತೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತರಾದ (ಕಂದಾಯ) ರೇಖಾ ಶೆಟ್ಟಿ, ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್, ಮಂಗಳಾದೇವಿ ದೇವಸ್ಥಾನದ ಪ್ರತಿನಿಧಿಗಳು, ಬೀದಿಬದಿ ಮತ್ತು ಜಾತ್ರೆ ವ್ಯಾಪಾರಸ್ಥರ ಸಂಘದ ಪ್ರಮುಖರಾದ ಬಿ.ಕೆ.ಇಮ್ತಿಯಾಝ್, ಸುನಿಲ್ ಕುಮಾರ್ ಬಜಾಲ್, ಹರೀಶ್ ಪೂಜಾರಿ, ಪ್ರವೀಣ್ ಕುಮಾರ್ ಕದ್ರಿ, ರಿಯಾಜ್, ಶಾಫಿ ಬೆಂಗ್ರೆ, ಆಸೀಫ್ ಬಾವ ಉಪಸ್ಥಿತರಿದ್ದರು.

ವಿವಾದವೇನು?: ಮಂಗಳಾದೇವಿ ನವರಾತ್ರಿ ಉತ್ಸವಕ್ಕೆ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಿಲ್ಲ ಎಂಬುದು ಬೀದಿಬದಿ ಮತ್ತು ಜಾತ್ರೆ ವ್ಯಾಪಾರಸ್ಥರ ಸಂಘದ ಆರೋಪ. ಇದಕ್ಕೂ ಮುನ್ನ ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘವು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಈ ಹಿಂದಿನಂತೆ ಏಕ ಯಶಸ್ವಿ ಬಿಡ್ಡುದಾರರಿಗೆ ಏಲಂ ನೀಡದೆ ಎಲ್ಲಾ ವ್ಯಾಪರಸ್ಥರಿಗೆ ಅನುಕೂಲವಾಗುವಂತೆ ಏಲಂ ಮಾಡಬೇಕು ಎಂದು ಮನವಿ ಸಲ್ಲಿಸಿತ್ತು.

ಅದರಂತೆ ಜಿಲ್ಲಾಡಳಿತ ಎಲ್ಲಾ ವ್ಯಾಪಾರಿಗಳಿಗೂ ಅನುಕೂಲವಾಗುವಂತೆ ಏಲಂ ಮಾಡಲು ಸೂಚಿಸಿತ್ತು. ಆ ಬಳಿಕ ದೇವಸ್ಥಾನದಿಂದ ಟೆಂಡರ್ ಕರೆದು 94 ಮಳಿಗೆಯನ್ನು ಏಲಂ ಮಾಡಲಾಗಿತ್ತು. ಆದರೆ ಈ ಏಲಂ ಪ್ರಕ್ರಿಯೆಯಲ್ಲಿ ಅನ್ಯಧರ್ಮಿಯ ವ್ಯಾಪಾರಿಗಳು ಭಾಗವಹಿಸಿರಲಿಲ್ಲ ಎಂಬುದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿತ್ತು.

ಮರು ಏಲಂ ನಡೆದಲ್ಲಿ ಅನಾಹುತಕ್ಕೆ ಜಿಲ್ಲಾಡಳಿತ ಹೊಣೆ-ವಿ.ಹಿಂ.ಪ: ವ್ಯಾಪಾರ ಮಳಿಗೆಗೆ ಮರು ಏಲಂ ನಡೆಸಿದಲ್ಲಿ ಅಥವಾ ಹೆಚ್ಚುವರಿ ಅಂಗಡಿ ನೀಡಿದಲ್ಲಿ ಮುಂದೆ ನಡೆಯುವ ಅನಾಹುತಕ್ಕೆ ಜಿಲ್ಲಾಡಳಿತ ಹೊಣೆ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ವಿಹಿಂಪ, ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನದಲ್ಲಿ ಪ್ರತೀ ವರ್ಷ ನಡೆಯುವ ಜಾತ್ರಾ ಸಂಧರ್ಭದಲ್ಲಿ, ದೇವಸ್ಥಾನ ಮುಂಭಾಗ ರಸ್ತೆಯ ಎರಡು ಬದಿಯಲ್ಲಿ ಸಂತೆ ವ್ಯಾಪಾರಕ್ಕೆ ಅಂಗಡಿಗಳನ್ನು ನೂರಾರು ವರ್ಷಗಳಿಂದ ದೇವಸ್ಥಾನವೇ ಏಲಂ ಮೂಲಕ ವ್ಯಾಪಾರಸ್ಥರಿಗೆ ನೀಡಿಕೊಂಡು ಬರುವ ಸಂಪ್ರದಾಯ. ಈ ಬಾರಿಯೂ ಕೂಡ ಏಲಂ ನಡೆದು ಸುಮಾರು 80 ವ್ಯಾಪಾರಸ್ಥರು ಅಂಗಡಿ ಪಡೆದಿರುತ್ತಾರೆ.

ಆದರೆ ಇವತ್ತು ಬೀದಿ ಬದಿ ವ್ಯಾಪಾರಸ್ಥರ ಸಂಘ ಮರು ಏಲಂ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ಇದನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಖಂಡಿಸುತ್ತದೆ. ಸಂಪ್ರದಾಯ ಮುರಿದು ಮರು ಏಲಂ ನಡೆಸದಂತೆ ಹಾಗು ಹೆಚ್ಚುವರಿ ಅಂಗಡಿ ನೀಡದಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮನವಿ ಮಾಡುತ್ತದೆ. ಒಂದು ವೇಳೆ ಸಂಪ್ರದಾಯ ಮುರಿದು ಮರು ಏಲಂ ನಡೆಸಿ ಅಥವಾ ಹೆಚ್ಚುವರಿ ಅಂಗಡಿ ನೀಡಿದಲ್ಲಿ ಮುಂದೆ ನಡೆಯುವ ಅನಾಹುತಕ್ಕೆ ಜಿಲ್ಲಾಡಳಿತ ಹೊಣೆ ಎಂದು ಎಚ್ಚರಿಸುತ್ತದೆ ಎಂದು ವಿಹಿಪ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳಾದೇವಿ ನವರಾತ್ರಿ ಉತ್ಸವ: ಅನ್ಯಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಆರೋಪ-ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.