ETV Bharat / state

ಮಂಗಳೂರು ದೋಣಿ ದುರಂತ: ಮೃತರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ ವಿತರಣೆ

ಮಂಗಳೂರು ದೋಣಿ ದುರಂತದಲ್ಲಿ ಮೃತಪಟ್ಟವರಿಗೆ ಇಂದು ಪರಿಹಾರದ ಚೆಕ್​​ ವಿತರಣೆ ಮಾಡಲಾಯಿತು. ಮೃತ ಮೀನುಗಾರರ ಕುಟುಂಬದವರು ಬಡವರಾಗಿದ್ದು, 10 ಲಕ್ಷ ರೂ. ಪರಿಹಾರ ಒದಗಿಸಬೇಕೆಂದು ಮೀನುಗಾರರ ಕುಟುಂಬದಿಂದ ಒತ್ತಾಯ ಕೇಳಿ ಬರುತ್ತಿದೆ.

ಮೃತರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ ವಿತರಣೆ

author img

By

Published : Dec 3, 2020, 1:58 PM IST

ಮಂಗಳೂರು: ದೋಣಿ ದುರಂತ ಪ್ರಕರಣದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ತಲಾ 6 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಮೃತರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ ವಿತರಿಸಿದ ಕೋಟಾ ಶ್ರೀನಿವಾಸ ಪೂಜಾರಿ

ಬಳಿಕ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ದೋಣಿ ದುರಂತದಲ್ಲಿ ಮೃತಪಟ್ಟವರಿಗೆ ಇಂದು ಪರಿಹಾರ ಚೆಕ್​​ ವಿತರಣೆ ಮಾಡಲಾಯಿತು. ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ, ಕರಾವಳಿ ಕಾವಲುಪಡೆಯನ್ನು ಬಲಪಡಿಸಬೇಕೆಂದು ಗೃಹ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಇದನ್ನು ಓದಿ: ನಾವೆಲ್ಲ ಒಟ್ಟಿಗಿದ್ದೇವೆ,‌ ಮುಂದೆಯೂ ಹಾಗೆಯೇ ಇರುತ್ತೇವೆ: ಬಿ.ಸಿ.ಪಾಟೀಲ್

ಮೃತ ಮೀನುಗಾರರ ಕುಟುಂಬದವರು ಬಡವರಾಗಿದ್ದು, 10 ಲಕ್ಷ ರೂ. ಪರಿಹಾರ ಒದಗಿಸಬೇಕೆಂದು ಮೀನುಗಾರರ ಕುಟುಂಬದಿಂದ ಒತ್ತಾಯ ಕೇಳಿ ಬರುತ್ತಿದೆ. ಈಗಿರುವ ನಿಯಮದ ಪ್ರಕಾರ ಗರಿಷ್ಠ ಆರು ಲಕ್ಷ ರೂ. ಪರಿಹಾರ ಒದಗಿಸಲು ಸಾಧ್ಯ. ಒಂದು ವಾರದೊಳಗೆ ನಾನು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​, ಶಾಸಕರು ಸೇರಿ ಸಿಎಂ ಭೇಟಿ ಮಾಡಿ ಇನ್ನು ನಾಲ್ಕು ಲಕ್ಷ ರೂ. ಸೇರಿಸಿ 10 ಲಕ್ಷ ರೂ. ಪರಿಹಾರ ನೀಡುವಂತೆ ಮನವಿ ಮಾಡುತ್ತೇವೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.