ಮಂಗಳೂರು : ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಸಿಬಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿತ್ತು. ಆದರೆ, ಇದೀಗ ವರ್ಗಾವಣೆ ರದ್ದುಗೊಳಿಸಿ ಅದೇ ಸ್ಥಾನದಲ್ಲಿ ಮುಂದುವರಿಯಲು ಆದೇಶಿಸಲಾಗಿದೆ.
ಶಿವಪ್ರಕಾಶ್ ನಾಯ್ಕ ಅವರನ್ನು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾಯಿಸಿ, ಅವರ ಸ್ಥಾನಕ್ಕೆ ಕಾಪು ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿತ್ತು. ಡ್ರಗ್ಸ್ ಜಾಲದ ತನಿಖೆ ಪೂರ್ಣಗೊಳ್ಳುವ ಮೊದಲೇ ಶಿವಪ್ರಕಾಶ್ ನಾಯ್ಕ ಅವರ ವರ್ಗಾವಣೆಯ ಹಿಂದೆ ರಾಜಕೀಯ ಒತ್ತಡದ ಆರೋಪ ಕೇಳಿ ಬಂದಿತ್ತು.
ಇದೀಗ ಈ ವರ್ಗಾವಣೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ರದ್ದುಗೊಳಿಸಿದ್ದಾರೆ. ಮಹೇಶ್ ಪ್ರಸಾದ್ ಅವರು ಕಾಪುವಿನಲ್ಲೇ ಮುಂದುವರಿಯಲಿದ್ದಾರೆ ಎಂದು ಪೊಲೀಸ್ ಉನ್ನತ ಮೂಲಗಳು ಖಚಿತಪಡಿಸಿವೆ.