ETV Bharat / state

ಮಂಗಳೂರು: ಕುಖ್ಯಾತ ಡ್ರಗ್ ಪೆಡ್ಲರ್​ಗಳ ಬಂಧನ.. 7 ಲಕ್ಷ ಮೌಲ್ಯದ ವಸ್ತುಗಳು ವಶ

author img

By ETV Bharat Karnataka Team

Published : Aug 28, 2023, 11:15 AM IST

ಅಕ್ರಮವಾಗಿ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಬಂಧಿಸಿದೆ.

ಆರೋಪಿಗಳು
ಆರೋಪಿಗಳು

ಮಂಗಳೂರು(ದಕ್ಷಿಣ ಕನ್ನಡ): ನಗರದಾದ್ಯಂತ ಮಾದಕ ವಸ್ತುವಾದ (Methylene dioxy methamphetamine) MDMA ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್​ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಸುರತ್ಕಲ್ ಕಾಟಿಪಳ್ಳದ ಶಾಕೀಬ್ ಯಾನೆ ಶಬ್ಬು(33), ಸುರತ್ಕಲ್ ಚೊಕ್ಕಬೆಟ್ಟುವಿನ ನಿಸಾರ್ ಹುಸೈನ್ ಯಾನೆ ನಿಚ್ಚು(34) ಬಂಧಿತರು.

ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಕಾರಿನಲ್ಲಿ 2 ಜನ ವ್ಯಕ್ತಿಗಳು ಅಕ್ರಮವಾಗಿ ಮಾದಕ ವಸ್ತುವಾದ MDMA ವಶದಲ್ಲಿರಿಸಿಕೊಂಡು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ .ಪಿ.ಎ. ಹೆಗಡೆರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಇವರನ್ನು ಬಂಧಿಸಿದ್ದಾರೆ.

ಆರೋಪಿಗಳ ವಶದಿಂದ ಒಟ್ಟು 52 ಗ್ರಾಂ ತೂಕದ ರೂ. 2,60,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, ಮೊಬೈಲ್ ಫೋನುಗಳು-2, ನಗದು ರೂ. 1,800/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 7,83,300/-ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ಪೈಕಿ ಶಾಕೀಬ್ ಯಾನೆ ಶಬ್ಬು ಎಂಬಾತನು ಈ ಹಿಂದೆ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಕಳ್ಳತನ ಪ್ರಕರಣಗಳು, ಕೊಲೆಯತ್ನ ಪ್ರಕರಣ, ಹಲ್ಲೆ ಪ್ರಕರಣ, ಬಜ್ಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮೂಡಬಿದ್ರಿ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ನಗರ ಠಾಣೆ, ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವಾ ಠಾಣೆಗಳಲ್ಲಿ ಸರಕಳ್ಳತನ ಪ್ರಕರಣ, ಮಣಿಪಾಲದಲ್ಲಿ ದರೋಡೆ ಪ್ರಕರಣಗಳು ಹೀಗೆ ಒಟ್ಟು 13 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ನಂತರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ವಾರಂಟ್​ ಹೊರಡಿಸಿರುತ್ತದೆ. ಇನ್ನೋರ್ವ ಆರೋಪಿ ನಿಸಾರ್ ಹುಸೈನ್ ಯಾನೆ ನಿಚ್ಚು ಎಂಬಾತನು ಈ ಹಿಂದೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆ ಯತ್ನ ಪ್ರಕರಣ, ಬರ್ಕೆ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ, ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ, ಮಂಗಳೂರು ಪೂರ್ವ ಠಾಣೆ, ಉಪ್ಪಿನಂಗಡಿ, ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ನಡೆಸಿದ 3 ಪ್ರಕರಣಗಳು, ಮಂಗಳೂರು ದಕ್ಷಿಣ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 7 ವಾರಂಟ್ ಜ್ಯಾರಿಯಲ್ಲಿರುತ್ತದೆ. ಅಲ್ಲದೇ ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಕೂಡಾ ಭಾಗಿಯಾಗಿದ್ದು, ಈ ಪ್ರಕರಣದಲ್ಲಿ ಕೂಡಾ ತಲೆಮರೆಸಿಕೊಂಡಿದ್ದನು.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ .ಪಿ.ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಬಿಜೈ ಬಳಿ ಅಕ್ರಮ ಸಾರಾಯಿ ಮಾರಾಟ ದಂಧೆ - ಇಬ್ಬರ ಬಂಧನ: ನಗರದ ಬಿಜೈ ಬಳಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ಕಾವೂರು ಆಕಾಶಭವನದ ಚಿದಾನಂದ ಚಿತ್ತು (35) ಮತ್ತು ಮೈಸೂರು ಹುಣಸೂರು ತಾಲೂಕಿನ ಸ್ವಾಮಿ ಗೌಡ (56) ಬಂಧಿತರು.

ಆರೋಪಿಗಳು ಬಿಜೈ ಕೆ.ಎಸ್ ಆರ್ ಟಿಸಿ ಎದುರು ಇರುವ ಹೊಟೇಲ್ ಹತ್ತಿರ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ 5750 ರೂ ಮೌಲ್ಯದ 90 ಎಮ್ ಎಲ್ ನ 128 ಮಧ್ಯದ ಪ್ಯಾಕೆಟ್​ ಮತ್ತು ರೂ 2500 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಉರ್ವಾ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Rape case: ದಾವಣಗೆರೆಯಲ್ಲಿ ಜೈಲಿನ ಗೋಡೆ ಜಿಗಿದು ಪರಾರಿಯಾಗಿದ್ದ ಅತ್ಯಾಚಾರ ‌ಪ್ರಕರಣದ ಆರೋಪಿ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.