ETV Bharat / state

ನೇತ್ರಾವತಿ ನದಿ ಸೇತುವೆ ಮೇಲೆ ಬೈಕ್​ ಬಿಟ್ಟು ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆ!

ನೇತ್ರಾವತಿ ನದಿ ಸೇತುವೆ ಮೇಲೆ ಬೈಕ್​ ಬಿಟ್ಟು ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದಾನೆ.

Praveen safalya
Praveen safalya
author img

By

Published : Jun 10, 2020, 2:56 PM IST

ಮಂಗಳೂರು: ಸಾಲಗಾರರ ಕಿರಿಕಿರಿ ತಾಳಲಾರದೆ ಉಳ್ಳಾಲ ಠಾಣಾ ವ್ಯಾಪ್ತಿಯ ಜೆಪ್ಪಿನ ಮೊಗರು ನೇತ್ರಾವತಿ ನದಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬಿಂಬಿಸಲು ಬೈಕ್​ಅನ್ನು ಸೇತುವೆ ಮೇಲೆ ನಿಲ್ಲಿಸಿ ಜನರಲ್ಲಿ ಗಾಬರಿ ಮೂಡಿಸಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಮುಡಿಪು ಸಮೀಪದ ಕುರ್ನಾಡು ನಿವಾಸಿ ಪ್ರವೀಣ್ ಸಫಲ್ಯ(28) ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದು, ಬೈಕ್ ನೇತ್ರಾವತಿ ಸೇತುವೆ ಮೇಲೆ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಮುಳುಗು ತಜ್ಞರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು. ಆದರೆ ಇಂದು ಮುಂಜಾನೆ ಆತ ಶಿವಮೊಗ್ಗಕ್ಕೆ ತೆರಳಿರುವ ಮಾಹಿತಿ ಲಭಿಸಿದೆ.

ನಿನ್ನೆ ರಾತ್ರಿ 7.30 ಗಂಟೆ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿತ್ತು. ಎಸ್.ಎಲ್.ಆರ್. ಪ್ರವೀಣ್ ಲಿಮಿಟೆಡ್ ಕಂಪನಿಯ ಸೇಲ್ಸ್​ ಮ್ಯಾನೇಜರ್ ಆಗಿ ಈತ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ಸ್ನೇಹಿತರ ಬಳಿ ಈ ವಿಚಾರ ತಿಳಿಸಿದ್ದ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಲಗಾರರ ಕಾಟ ತಾಳಲಾರದೆ ಬೈಕ್ ಸೇತುವೆ ಮೇಲೆ ನಿಲ್ಲಿಸಿ ಶಿವಮೊಗ್ಗಕ್ಕೆ ತೆರಳಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.