ಮಂಗಳೂರು: ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ಬಲ್ಮಠದ ಜ್ಯೂಸ್ ಜಂಕ್ಷನ್ ಬಳಿ ನಡೆದಿದೆ. ಕಾರಿನ ಮಾಲೀಕರು ಬಲ್ಮಠದ ಜ್ಯೂಸ್ ಜಂಕ್ಷನ್ ಬಳಿ ಕಾರು ನಿಲ್ಲಿಸಿ ಜ್ಯೂಸ್ ಕುಡಿಯಲು ಹೋಗಿದ್ದರು. ಈ ವೇಳೆ, ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಫೋರ್ಡ್ ಕಾರಿನ ಎಸಿ ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ.
ಇದನ್ನೂ ಓದಿ: ಆಟೋದಲ್ಲಿ ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಮೂವರು ಪೊಲೀಸ್ ವಶಕ್ಕೆ