ಮಕ್ಕಳೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಮುಕ್ತ ಸಂವಾದ - ಮಂಗಳೂರು ಮಹಾನಗರ ಪಾಲಿಕೆ ಸಂವಾದ ಕಾರ್ಯಕ್ರಮ
ಶಾಲಾ ವಿದ್ಯಾರ್ಥಿಗಳೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ಇಲಾಖೆಯ ಅಧಿಕಾರಿಗಳು ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಮಂಗಳೂರು: ನಗರದಲ್ಲಿ ಪ್ರಪ್ರಥಮ ಬಾರಿಗೆ ಮಿನಿ ವಿಧಾನಸೌಧದ ಆವರಣದಲ್ಲಿರುವ ಸರಕಾರಿ ನೌಕರರ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ಇಲಾಖೆಯ ಅಧಿಕಾರಿಗಳು ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಪಾಲಿಕೆಯ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಕುಂದುಕೊರತೆಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
ಈ ವೇಳೆ ಸಂವಾದದಲ್ಲಿ ಭಾಗವಹಿಸಿದ್ದ ಸೈಂಟ್ ಜೋಸೆಫ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಮಾತನಾಡಿ, ಮುಸ್ಲಿಂ ಸಮುದಾಯದಲ್ಲಿ ಏಳನೇ, ಹತ್ತನೇ ತರಗತಿಯ ಬಳಿಕ ಶಿಕ್ಷಣವನ್ನು ಹೆತ್ತವರು ಮೊಟಕು ಗೊಳಿಸುತ್ತಾರೆ. ಅಲ್ಲದೇ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲೂ ಭಾಗವಹಿಸದಂತೆ ನಿರ್ಬಂಧ ಹೇರುತ್ತಾರೆ. ತನಗೆ ಈ ವರ್ಷದ ಬಳಿಕ ಶಾಲೆಗೆ ಹೋಗುವುದು ಬೇಡ ಎಂದು ಹೇಳುತ್ತಿದ್ದಾರೆ. ನನಗೆ ಶಿಕ್ಷಣ ಮುಂದುವರಿಸಲು ಆಸಕ್ತಿ ಇದೆ. ಇದಕ್ಕೆ ಪರಿಹಾರ ಸೂಚಿಸಿ ಎಂದು ಅಳಲು ತೋಡಿಕೊಂಡಳು.
ತಕ್ಷಣ ಪ್ರತಿಕ್ರಿಯಿಸಿದ ಮಂಗಳೂರು ನಗರ ಪಾಲಿಕೆಯ ಉಪ ಆಯುಕ್ತೆ ಗಾಯತ್ರಿ ಎನ್. ನಾಯಕ್, ಶಿಕ್ಷಣ ಇಲಾಖೆಯವರು ಆಕೆಯ ಪೋಷಕರೊಂದಿಗೆ ಚರ್ಚಿಸಿ, ವೈಯಕ್ತಿಕ ನೆಲೆಯಲ್ಲಿ ಈ ಪ್ರಕರಣವನ್ನು ತೆಗೆದುಕೊಂಡು ವಿದ್ಯಾರ್ಥಿನಿಯ ಶಿಕ್ಷಣ ಮುಂದುವರಿಯುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದ್ರು.
ಈ ಬಗ್ಗೆ ಮಾತನಾಡಿದ ವಕ್ಫ್ ಅಧಿಕಾರಿ, ವಿದ್ಯಾರ್ಥಿನಿಯ ಹೆತ್ತವರ ಮೊಬೈಲ್ ಸಂಖ್ಯೆ ಪಡೆದು ನೇರವಾಗಿ ಅವರೊಂದಿಗೆ ಮಾತನಾಡಿ, ಶಿಕ್ಷಣ ಮೊಟಕುಗೊಳಿಸದಂತೆ ನೋಡಿಕೊಳ್ಳುವ ಭರವಸೆ ನೀಡಿದರು.
ಕಾರ್ ಸ್ಟ್ರೀಟ್ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಾತನಾಡಿ, ಶಿಕ್ಷಣ ಅಂದರೆ ಬರೀ ಪಾಠದ ಓದು ಮಾತ್ರವಲ್ಲದೆ ಪಠ್ಯೇತರ ವಿಷಯದಲ್ಲೂ ನಾವು ಸಾಧನೆ ಮಾಡಬಹುದು. ಆದರೆ, ಇಂದು ಹೆತ್ತವರು ಡಿಗ್ರಿ, ಇಂಜಿನಿಯರಿಂಗ್, ಡಾಕ್ಟರ್ ಮುಂತಾದ ಪದವಿ ಗಳಿಸಿದರೆ ಮಾತ್ರ ಭವಿಷ್ಯ ಎಂದು ತಿಳಿದಿದ್ದಾರೆ. ಮಕ್ಕಳ ಆಸೆ ಆಕಾಂಕ್ಷೆಗಳಿಗೆ ಬೆಲೆಕೊಡುತ್ತಿಲ್ಲ. ಇದಕ್ಕೆ ಪರಿಹಾರ ಸೂಚಿಸಿ ಎಂದು ಹೇಳಿದರು.
ಈ ವಿಚಾರವಾಗಿ ಶಿಕ್ಷಣ ಇಲಾಖೆಯ ಅಧಿಕಾರಿ ಮಾತನಾಡಿ, ಇಂದು ಎಲ್ಲಾ ಶಾಲೆಗಳಲ್ಲಿ ಶಿಕ್ಷಣದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳು ಇರುತ್ತವೆ. ಅಲ್ಲಿ ತಮ್ಮ ಪ್ರತಿಭೆಗಳನ್ನು ಚೆನ್ನಾಗಿ ಬಳಸಿಕೊಂಡರೆ. ಮುಂದೆ ಯಾವ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಮನದಟ್ಟಾಗುತ್ತದೆ. ಈ ಮೂಲಕ ಅವರು ತಮ್ಮ ಕಾರ್ಯ ಸಾಧನೆ ಮಾಡಬಹುದು ಎಂದು ಸಲಹೆ ನೀಡಿದ್ರು.
ಅದೇ ರೀತಿ, ವಿದ್ಯಾರ್ಥಿಗಳು ಮದ್ಯಪಾನ, ಮಾದಕ ವ್ಯಸನಗಳಿಗೆ ಬಲಿಯಾಗುವ ಬಗ್ಗೆ, ಬಸ್ ನಿರ್ವಾಹಕರು ವಿದ್ಯಾರ್ಥಿಗಳಲ್ಲಿ ಅತಿರೇಕದ ವರ್ತನೆ ತೋರುವುದು, ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸೋದಿಲ್ಲ. ಸರಕಾರಿ ಶಾಲೆಗಳಲ್ಲಿ ಶೌಚಾಲಯದ ಸಮಸ್ಯೆ ಮುಂತಾದ ತಮ್ಮ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಅಧಿಕಾರಿಗಳಿಗೆ ತಿಳಿಸಿ ಪರಿಹಾರ ಕಂಡುಕೊಂಡರು.
ಪಾಲಿಕೆಯ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂವಾದ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಕ್ಕಳ ಕುಂದುಕೊರತೆಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸಿದರು.
Body:ಸಂವಾದದಲ್ಲಿ ಭಾಗವಹಿಸಿದ ಸೈಂಟ್ ಜೋಸೆಫ್ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಮಾತನಾಡಿ, ಮುಸ್ಲಿಂ ಸಮುದಾಯದಲ್ಲಿ ಏಳನೇ, ಹತ್ತನೇ ತರಗತಿಯ ಬಳಿಕ ಶಿಕ್ಷಣವನ್ನು ಹೆತ್ತವರು ಮೊಟಕು ಗೊಳಿಸುತ್ತಾರೆ. ಅಲ್ಲದೆ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ನಿರ್ಬಂಧ ಹೇರುತ್ತಾರೆ. ತನಗೆ ಈ ವರ್ಷದ ಬಳಿಕ ಶಾಲೆಗೆ ಹೋಗುವುದು ಬೇಡ ಎಂದು ಹೇಳುತ್ತಿದ್ದಾರೆ. ನನಗೆ ಶಿಕ್ಷಣ ಮುಂದುವರಿಸಲು ಆಸಕ್ತಿ ಇದೆ. ಇದಕ್ಕೆ ಪರಿಹಾರ ಸೂಚಿಸಿ ಎಂದು ಅಳಲು ತೋಡಿಕೊಂಡಳು. ತಕ್ಷಣ ಪ್ರತಿಕ್ರಿಯಿಸಿದ ಮಂಗಳೂರು ನಗರ ಪಾಲಿಕೆಯ ಉಪ ಆಯುಕ್ತೆ ಗಾಯತ್ರಿ ಎನ್. ನಾಯಕ್, ಶಿಕ್ಷಣ ಇಲಾಖೆಯವರು ಆಕೆಯ ಪೋಷಕರೊಂದಿಗೆ ಚರ್ಚೆ ಮಾಡಿ, ವೈಯಕ್ತಿಕ ನೆಲೆಯಲ್ಲಿ ಈ ಪ್ರಕರಣವನ್ನು ತೆಗೆದುಕೊಂಡು ವಿದ್ಯಾರ್ಥಿನಿಯ ಶಿಕ್ಷಣವು ಮುಂದುವರಿಯುವಂತೆ ನೋಡಿಕೊಳ್ಳಬೇಕೆಂದು ಆದೇಶ ನೀಡಿದರು.
ಈ ಬಗ್ಗೆ ಮಾತನಾಡಿದ ವಕ್ಫ್ ಅಧಿಕಾರಿ, ವಿದ್ಯಾರ್ಥಿನಿಯ ಹೆತ್ತವರ ಮೊಬೈಲ್ ಸಂಖ್ಯೆ ಪಡೆದು ನೇರವಾಗಿ ಅವರೊಂದಿಗೆ ಮಾತನಾಡಿ ಶಿಕ್ಷಣ ಮೊಟಕುಗೊಳಿಸದಂತೆ ನೋಡಿಕೊಳ್ಳುವ ಭರವಸೆ ನೀಡಿದರು.
ನಗರದ ಕಾರ್ ಸ್ಟ್ರೀಟ್ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಾತನಾಡಿ, ಶಿಕ್ಷಣ ಅಂದರೆ ಬರೀ ಪಾಠದ ಓದು ಮಾತ್ರವಲ್ಲದೆ ಪಠ್ಯೇತರ ವಿಷಯದಲ್ಲೂ ನಾವು ಸಾಧನೆ ಮಾಡಬಹುದು. ಆದರೆ ಇಂದು ಹೆತ್ತವರು ಡಿಗ್ರಿ, ಇಂಜಿನಿಯರಿಂಗ್, ಡಾಕ್ಟರ್ ಮುಂತಾದ ಪದವಿ ಗಳಿಸಿದರೆ ಮಾತ್ರ ಭವಿಷ್ಯ ಎಂದು ತಿಳಿದಿದ್ದಾರೆ. ಮಕ್ಕಳ ಆಸೆ ಆಕಾಂಕ್ಷೆಗಳಿಗೆ ಬೆಲೆಕೊಡುತ್ತಿಲ್ಲ. ಇದಕ್ಕೆ ಪರಿಹಾರ ಸೂಚಿಸಿ ಎಂದು ಹೇಳಿದರು. ಈ ಸಂದರ್ಭ ಶಿಕ್ಷಣ ಇಲಾಖೆಯ ಅಧಿಕಾರಿ ಮಾತನಾಡಿ, ಇಂದು ಎಲ್ಲಾ ಶಾಲೆಗಳಲ್ಲಿ ಶಿಕ್ಷಣದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳು ಇರುತ್ತವೆ. ಅಲ್ಲಿ ತಮ್ಮ ಪ್ರತಿಭೆಗಳನ್ನು ಚೆನ್ನಾಗಿ ಬಳಸಿಕೊಂಡರೆ. ಮುಂದೆ ಯಾವ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಮನದಟ್ಟಾಗುತ್ತದೆ. ಈ ಮೂಲಕ ಅವರು ತಮ್ಮ ಕಾರ್ಯ ಸಾಧನೆ ಮಾಡಬಹುದು ಎಂದು ಹೇಳಿದರು.
ಅದೇ ರೀತಿ, ವಿದ್ಯಾರ್ಥಿಗಳು ಮದ್ಯಪಾನ, ಮಾದಕ ವ್ಯಸನಗಳಿಗೆ ಬಲಿಯಾಗುವ ಬಗ್ಗೆ, ಬಸ್ ನಿರ್ವಾಹಕರು ವಿದ್ಯಾರ್ಥಿಗಳಲ್ಲಿ ಅತಿರೇಕದ ವರ್ತನೆ ತೋರುವುದು, ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸೋದಿಲ್ಲ. ಸರಕಾರಿ ಶಾಲೆಗಳಲ್ಲಿ ಶೌಚಾಲಯದ ಸಮಸ್ಯೆ ಮುಂತಾದ ತಮ್ಮ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಅಧಿಕಾರಿಗಳಿಗೆ ತಿಳಿಸಿ ಪರಿಹಾರ ಕಂಡುಕೊಂಡರು.
Reporter_Vishwanath Panjimogaru
Conclusion:
TAGGED:
ಮಿನಿ ವಿಧಾನಸೌಧದ ಆವರಣ ಮಂಗಳೂರು