ಮಂಗಳೂರು : ಆಯುಧ ಪೂಜೆ ದಿನ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಗೆ ತ್ರಿಶೂಲ ವಿತರಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರ ತಪ್ಪಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಶೀಲನೆ ನಡೆಸಿದಾಗ ಪ್ರತಿವರ್ಷ ಈ ರೀತಿ ಸಾಂಕೇತಿಕವಾಗಿ ತ್ರಿಶೂಲ ದೀಕ್ಷೆ ನೀಡಲಾಗುತ್ತಿದೆ ಎಂದು ಆಯೋಜಕರು ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಕಾನೂನು ಪ್ರಕಾರ ತಪ್ಪಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಕಾರ್ಯಕರ್ತರಿಗೆ ತ್ರಿಶೂಲ ವಿತರಣೆ :
ಆಯುಧ ಪೂಜೆಯ ನಿಮಿತ್ತ ನಗರದ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ತಿನ ವಿಶ್ವಶ್ರೀ ಕಚೇರಿಯಲ್ಲಿ ವಿಹಿಂಪ ಮುಖಂಡರು, ಕಾರ್ಯಕರ್ತರಿಗೆ ತ್ರಿಶೂಲ ವಿತರಿಸಿದ್ದರು. ಈ ಕುರಿತಾತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ತ್ರಿಶೂಲ ವಿತರಣೆ ಕಾರ್ಯಕ್ರಮದಲ್ಲಿ ಬಜರಂಗದಳ ನಾಯಕ ರಘು ಸಕಲೇಶಪುರ, ವಿಹಿಂಪ ನಾಯಕ ಶರಣ್ ಪಂಪ್‌ವೆಲ್ ಮತ್ತಿತರರು ಪಾಲ್ಗೊಂಡಿದ್ದರು.