ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಬಳಕೆಯ ನಿಯಂತ್ರಣಕ್ಕೆ ಮುಂದಾಗಿರುವ ಪೊಲೀಸರು, ವಿವಿಧ ಮಾದಕ ವಸ್ತುಗಳ ಪ್ರಕರಣದಲ್ಲಿ ಭಾಗಿಯಾಗಿದ್ದ 94 ಮಂದಿ ಹಳೆಯ ಆರೋಪಿಗಳ ಪರೇಡ್ ನಡೆಸಿದರು.
ಮಂಗಳೂರು ನಗರ ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್, ಆರೋಪಿಗಳ ಪರೇಡ್ ನಡೆಸಿ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಹಿಂದಿನ ಮೂರು ವರ್ಷಗಳಲ್ಲಿ ವಿವಿಧ ಡ್ರಗ್ಸ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪರೇಡ್ ನಡೆಸಿ ವಿಚಾರಣೆ ನಡೆಸಲಾಯಿತು.
ಡ್ರಗ್ಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.