ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದಿರುವ ವಾಹನ ಕಳವು, ಮನೆಗಳವು, ಸರಗಳವು, ದೇವಸ್ಥಾನ ಕಳವು, ದನಗಳವು ಸೇರಿದಂತೆ ಹಲವು ಪ್ರಕರಣಗಳ 252 ಆರೋಪಿಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ 179 ಮೊಬೈಲ್ ಫೋನ್ಗಳು, 67 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಮನೆಗಳನ್ನು ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ. ತನಿಖೆಯ ವೇಳೆ ಆರೋಪಿಗಳು ಬೇರೆಯವರ ಹೆಸರಿನಲ್ಲಿರುವ ಸಿಮ್ ಕಾರ್ಡ್ಗಳನ್ನು ಬಳಕೆ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಮೊಬೈಲ್ಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ಇವರಲ್ಲಿ ಕೆಲ ಆರೋಪಿಗಳು ಮಾದಕದ್ರವ್ಯ ಸೇವನೆ ಮಾಡಿರುವ ಬಗ್ಗೆ ಅನುಮಾನ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ 35 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ಪತ್ತೆಯಾಗಿದೆ. ಅಂತವರ ಅವರ ಮೇಲೆ ಎನ್ಡಿಪಿಎಸ್ 27(ಬಿ) ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಎಲ್ಲಾ ಆರೋಪಿಗಳ ಮೇಲೆ 110 ಹಾಗೂ 107 ಸಿಆರ್ಪಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬಾಲ್ಯ ವಿವಾಹದಿಂದ ಬೇಸತ್ತು ರಾತ್ರೋರಾತ್ರಿ ಬಂಗಾರಪೇಟೆಯ ಹೆದ್ದಾರಿಗೆ ಬಂದ ಬಾಲಕಿ!