ಮಂಗಳೂರು: ಪಂಪ್ವೆಲ್ನಲ್ಲಿ ನಿರ್ಮಾಣವಾಗುತ್ತಿರುವ ಫ್ಲೈ ಓವರ್ ಕಾಮಗಾರಿ ಆರಂಭವಾಗಿ ಹತ್ತು ವರ್ಷ ತುಂಬಿದೆ. ದಶಕಗಳ ಕಾಲದ ಕಾಮಗಾರಿ ಕೊನೆಗೂ ಪೂರ್ಣಗೊಂಡಿದೆ!
ಕೇರಳದಿಂದ ಮುಂಬಯಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಪಂಪ್ವೆಲ್ನಲ್ಲಿ 10 ವರ್ಷದಿಂದ ಫ್ಲೈ ಓವರ್ ಕಾಮಗಾರಿ ನಡೆಯುತ್ತಲೇ ಇತ್ತು. ಇದರ ಗುತ್ತಿಗೆ ಪಡೆದುಕೊಂಡಿದ್ದ ನವಯುಗ ಸಂಸ್ಥೆ ಆರ್ಥಿಕ ಮುಗ್ಗಟ್ಟಿನಿಂದ ಪ್ಲೈ ಓವರ್ ಕಾಮಗಾರಿ ವೇಗ ಪಡೆದಿರಲಿಲ್ಲ. ವಿಳಂಬ ಕೆಲಸದಿಂದ ಫ್ಲೈ ಓವರ್ ಕಾಮಗಾರಿ ಪೂರ್ಣವಾಗದೆ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈ ಕಾಮಗಾರಿ ಪೂರ್ಣವಾಗದ ಹಿನ್ನೆಲೆಯಲ್ಲಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದರು.