ಸುಳ್ಯ:ಬಿಜೆಪಿ ಪಕ್ಷದ ಪ್ರಭಾವಿ ನಾಯಕರೊಬ್ಬರು ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ನದಿಗೆ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ನವೀನ್ ಕುಮಾರ್ ರೈ ಮೇನಾಲ ಮೃತಪಟ್ಟ ದುರ್ದೈವಿಗಳು. ಉದ್ಯಮಿಯಾಗಿದ್ದ ನವೀನ್ ಕುಮಾರ್ ಅವರು ಸುಳ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಸಕ್ರೀಯರಾಗಿ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದರು. ಸುಳ್ಯ ಭಾಗದಲ್ಲಿ ನವೀನ್ ಕುಮಾರ್ ಅವರು ಪ್ರಭಾವಿ ನಾಯಕರಾಗಿದ್ದರು.
ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ನೀರು ಬಿಡುವ ಪಂಪ್ನ ಫುಟ್‌ವಾಲ್ವೂ ಸರಿ ಪಡಿಸಲು ನದಿಗೆ ಇಳಿದಿದ್ದಾಗ, ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ .ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೋಡಿ ಕೊಲೆ,ಬೆಚ್ಚಿಬಿದ್ದ ತೀರ್ಥಹಳ್ಳಿ ಜನ - ಶಿವಮೊಗ್ಗ : ಇನ್ನೊಂದೆಡೆ, ನಿರ್ಮಾಣ ಹಂತದ ಕಟ್ಟಡದಲ್ಲಿ ಜೋಡಿ ಕೊಲೆ ನಡೆದಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ ಎಂಬಲ್ಲಿ ನಡೆದಿದೆ. ಇಲ್ಲಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಬುಧವಾರ ರಾತ್ರಿ ಜೋಡಿ ಕೊಲೆ ನಡೆದಿರುವುದಾಗಿ ತಿಳಿದು ಬಂದಿದೆ. ಮೃತರನ್ನು ದಾವಣಗೆರೆ ಮೂಲದ ಕಟ್ಟಡ ಕಾರ್ಮಿಕರಾದ ಮಂಜಪ್ಪ(45) ಹಾಗೂ ಬೀರಪ್ಪ(46) ಎಂದು ಗುರುತಿಸಲಾಗಿದೆ. ರಾಮಪ್ಪ ಕೊಲೆ ಮಾಡಿದ ಆರೋಪಿ.
ರಾಮಪ್ಪ ಎಂಬಾತ ಇಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ತೀರ್ಥಹಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೊತೆಗೆ ಬೆರಳಚ್ಚು ತಂಡವೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಇದನ್ನೂಓದಿ:ಕೆಲಸ ಕೊಟ್ಟ ಮಾಲೀಕನ ಖಾತೆಯಲ್ಲಿದ್ದ ಹಣ ಮಂಗಮಾಯ; ಕೈಚಳಕದ ಹಿಂದಿದೆ ಸಹೋದರಿಯರ ಪ್ರೇಮ್ ಕಹಾನಿ