ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಇವರು ಯಾವ ರೀತಿ ಸಾವನ್ನಪ್ಪಿದ್ದಾರೆ ಎಂಬುದು ಶವ ಮಹಜರು ನಡೆಸಿದ ಬಳಿಕ ತಿಳಿಸುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ ಎಸ್. ಹರ್ಷಾ ಹೇಳಿದ್ದಾರೆ.
ಈ ಬಗ್ಗೆ ಸಭೆ ನಡೆಸಿದ ಮಂಗಳೂರು ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಹಮ್ಮದ್ ಮಸೂದ್ ಮಾತನಾಡಿ, ಎಲ್ಲರೂ ಶಾಂತಿ ಕಾಪಾಡಬೇಕು. ಯಾವುದೇ ರೀತಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಿಸದಂತೆ ಕರೆ ನೀಡಿದರು.
ಅಲ್ಲದೆ ಪೊಲೀಸರು ರಾತ್ರಿ ಹೊತ್ತು ಮನೆಗೆ ನುಗ್ಗಿ ಯಾವುದೇ ರೀತಿಯಲ್ಲಿ ತೊಂದರೆ ಕೊಡಬಾರದು. ಹಾಗೆಯೇ ಮೃತಪಟ್ಟವರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.