ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50 ವರ್ಷ ಆಸುಪಾಸಿನ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಸ್ಥಳೀಯ ಎಂದು ಶಂಕಿಸಲಾಗಿದೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ವ್ಯಕ್ತಿಯ ಚಹರೆ: ಸುಮಾರು 5.5 ಅಡಿ ಎತ್ತರ, ಉದ್ದ ಮುಖ, ಗೋಧಿ ಮೈಬಣ್ಣ, ಸದೃಢ ಶರೀರ, ಕಪ್ಪು ಬಿಳಿ ಮಿಶ್ರಿತ ಗಡ್ಡ ಹಾಗೂ ಕಪ್ಪು ಬಣ್ಣದ ತಲೆಕೂದಲು. ಕೇಸರಿ ಬಣ್ಣದ ಅರ್ಧ ತೋಳಿನ ಶರ್ಟ್ ಧರಿಸಿರುತ್ತಾರೆ.ಈ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಪಣಂಬೂರು ಠಾಣೆ (0824- 2220530) ಸಂಪರ್ಕಿಸಲು ಪ್ರಕಟಣೆ ತಿಳಿಸಲಾಗಿದೆ.