ಮಂಗಳೂರು: ಕೊರೊನಾ ಸೋಂಕಿನಿಂದಾಗಿ ಮುಂದೂಡಲಾಗಿದ್ದ ಮಂಗಳೂರು ವಿವಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಇಂದಿನಿಂದ ಆರಂಭವಾಗಿದೆ.
ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಕೇರಳ-ಮಂಗಳೂರು ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಾಗಾಗಿ, ಪರೀಕ್ಷೆ ಬರೆಯಲಾಗದ ಕಾಸರಗೋಡಿನ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ವಿಶೇಷ ಪರೀಕ್ಷೆ ನಡೆಸಲಾಗುತ್ತದೆ.
ಇನ್ನು ಪರೀಕ್ಷೆ ಬರೆಯಲು ಸ್ವಂತ ವಾಹನಗಳಲ್ಲಿ ಬರುವ ಕೇರಳದ ವಿದ್ಯಾರ್ಥಿಗಳಿಗೆ ಗಡಿ ಭಾಗದಲ್ಲಿ ಪರೀಕ್ಷಾ ಪ್ರವೇಶ ಪತ್ರಿಕೆ ತೋರಿಸಿದ್ರೆ ದ.ಕ ಜಿಲ್ಲೆಯ ಗಡಿ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಆದರೆ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ವಿವಿ ವಿಶೇಷ ಪರೀಕ್ಷೆ ನಡೆಸುವ ಭರವಸೆ ನೀಡಿದೆ.
ಇಂದಿನಿಂದ ಆಗಸ್ಟ್ 17 ರವರೆಗೆ ಪದವಿ ಪರೀಕ್ಷೆ ನಡೆಯುತ್ತಿದ್ದು, ಕೊರೊನಾ ನಿಯಮ ಪಾಲನೆ ಮಾಡಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.