ಮಂಗಳೂರು: ಕೆಎಸ್ಆರ್ಟಿಸಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಏ. 12ರಿಂದ ನಡೆಯಬೇಕಿದ್ದ ಪದವಿ ಪರೀಕ್ಷೆ ಮುಂದೂಡಲಾಗಿದೆ.
ಏಪ್ರಿಲ್ 1ರಂದು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳು ಆರಂಭವಾಗಿತ್ತು. ಆದರೆ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಏ. 7ರಿಂದ 10ರವರೆಗಿನ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಸಾರಿಗೆ ವ್ಯವಸ್ಥೆಯಲ್ಲಿ ಇನ್ನೂ ವ್ಯತ್ಯಯವಿರುವುದರಿಂದ ಏ. 12ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ.
ಉಳಿದಂತೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್.ಧರ್ಮ ತಿಳಿಸಿದ್ದಾರೆ.