ETV Bharat / state

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ - Etv Bharat Kannada

2003ರಲ್ಲಿ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 19 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.

kn_dk
ಬಂಧಿತ ಆರೋಪಿ
author img

By

Published : Oct 12, 2022, 8:20 PM IST

ಸುಳ್ಯ: ಸುಮಾರು 19 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

2003ರಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇರಳ ವಯನಾಡ್ ಜಿಲ್ಲೆಯ ವೈತಿರಿ ತಾಲೂಕಿನ ಕಲ್ಲವಳಿಪ್ಪಲ್ ನಿವಾಸಿ ಕೆ.ಎಂ.ಸಿದ್ದಿಕ್ ಎಂಬಾತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ CC/1338/2003ರಂತೆ 457,380 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿತ್ತು. ವಾರಂಟುದಾರನಾಗಿರುವ ಮತ್ತು A1 ಆರೋಪಿಯಾಗಿರುವ ಸಿದ್ದಿಕ್ ಪೊಲೀಸರ ಕಣ್ಣು ತಪ್ಪಿಸಿ 19 ವರ್ಷಗಳಿಂದ ಪರಾರಿಯಾಗಿದ್ದ.

ಇದೀಗ ಆರೋಪಿಯನ್ನು ಬಂಧಿಸಿರುವ ಸುಳ್ಯ ಪೊಲೀಸರು ಆತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ: 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅಂದರ್​!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.