ಮಂಗಳೂರು: ರಾಜ್ಯದಾದ್ಯಂತ ಭೀತಿ ಸೃಷ್ಟಿಸಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದು, ತನಿಖಾಧಿಕಾರಿಗಳಿಂದ ತೀವ್ರ ವಿಚಾರಣೆ ನಡೆದಿದೆ.
ನಿನ್ನೆ ಬೆಂಗಳೂರಿನ ಮೊದಲನೇ ಎಸಿಎಂಎಂ ನ್ಯಾಯಾಲಯದಲ್ಲಿ ಆರೋಪಿಯನ್ನು ಹಾಜರುಪಡಿಸಲಾಗಿತ್ತು. ಅಲ್ಲಿ ನ್ಯಾಯಾಧೀಶರು ಅನುಮತಿ ನೀಡಿದ ಬಳಿಕ ತನಿಖಾ ತಂಡ ಮಂಗಳೂರಿಗೆ ಕರೆ ತಂದಿದೆ.
ಮಂಗಳೂರು ಪೊಲೀಸ್ ಆಯುಕ್ತ ಹರ್ಷಾ ನೇತೃತ್ವದಲ್ಲಿ ರಾತ್ರಿಯಿಡೀ ವಿಚಾರಣೆಗೊಳಪಡಿಸಿರುವ ಪೊಲೀಸ್ ಅಧಿಕಾರಿಗಳು ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ. ಆರೋಪಿಯನ್ನು ಇಂದು ಸಂಜೆಯೊಳಗೆ ಮಂಗಳೂರಿನ 6ನೇ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸರು ವಶಕ್ಕೆ ಪಡೆದುಕೊಳ್ಳಲಿದ್ದಾರೆ.