ETV Bharat / state

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ರಿಕ್ಷಾ ಚಾಲಕ ಗುಣಮುಖ - auto driver injured in cooker bomb blast

ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

auto driver
ಕುಕ್ಕರ್ ಬಾಂಬ್ ಸ್ಫೋಟ
author img

By

Published : Jan 15, 2023, 11:33 AM IST

ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಆಟೋ ರಿಕ್ಷಾ ಚಾಲಕ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಪುರುಷೋತ್ತಮ ಪೂಜಾರಿ ಅವರು ಪೂರ್ಣವಾಗಿ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಕಳುಹಿಸಲಾಗಿದೆ ಎಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಉದಯ ಕುಮಾರ್ ಕೆ ತಿಳಿಸಿದ್ದಾರೆ.

ನವೆಂಬರ್ 19ರಂದು ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಚಾಲಕ ಪುರುಷೋತ್ತಮ್ ಮತ್ತು ಆರೋಪಿ ಶಾರೀಕ್​ ಗಾಯಗೊಂಡಿದ್ದರು. ಇದೀಗ ಆಟೋ ಚಾಲಕ ಗುಣಮುಖರಾಗಿದ್ದು, ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಜೊತೆಗೆ, ಸೋಂಕಿನಿಂದ ರಕ್ಷಿಸಿಕೊಳ್ಳಲು ಇನ್ನೂ ಕನಿಷ್ಠ ಒಂದು ತಿಂಗಳ ಕಾಲ ಮನೆಯಲ್ಲೇ ಉಳಿದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.

ಪುರುಷೋತ್ತಮ ಅವರ ಮನೆ ದುಸ್ಥಿತಿಯಲ್ಲಿದೆ. ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಹೀಗಾಗಿ, ಕುಟುಂಬಸ್ಥರು ಸದ್ಯಕ್ಕೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ತೀರ್ಥಹಳ್ಳಿಯಲ್ಲಿ ಇಡಿ ದಾಳಿ: ಶಂಕಿತ ಉಗ್ರ ಶಾರೀಕ್ ಸೇರಿ ಮೂವರ ಮನೆಗಳಲ್ಲಿ ಮುಂದುವರೆದ ಶೋಧ ಕಾರ್ಯಾಚರಣೆ

ಇನ್ನೂ ಕೈ ಸೇರದ ಸರ್ಕಾರದ ಪರಿಹಾರ: ಬಾಂಬ್ ಸ್ಫೋಟದಿಂದ ಗಾಯಗೊಂಡಿರುವ ಪುರುಷೋತ್ತಮ ಅವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದರು. ಆದರೆ ಪರಿಹಾರದ ಹಣ ಇನ್ನೂ ಕೈ ಸೇರಿಲ್ಲ. ವೈಯಕ್ತಿಕ ನೆಲೆಯಲ್ಲಿ ಗೃಹ ಸಚಿವರು 50,000 ರೂ. ಮತ್ತು ಸುನಿಲ್ ಕುಮಾರ್ 25,000 ರೂ. ನೆರವು ನೀಡಿದ್ದರು. ಪುರುಷೋತ್ತಮ ಅವರ ಚಿಕಿತ್ಸಾ ವೆಚ್ಚವನ್ನು ಆರಂಭದಲ್ಲಿ ಇಎಸ್‌ಐನಿಂದ ಭರಿಸಲಾಗಿತ್ತು. ಈ ವಿಚಾರ ಸುದ್ದಿಯಾದ ಬಳಿಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದ್ದರು.

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವ, ಡಿಜಿಪಿ ಭೇಟಿ

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ನವೆಂಬರ್ 19ರಂದು ಮಂಗಳೂರಿನ ಗರೋಡಿಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಶಂಕಿತ ಉಗ್ರ ಶಾರೀಕ್ ಕೈಯಲ್ಲಿದ್ದ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಈ ಸಂದರ್ಭದಲ್ಲಿ ಗಾಯಗೊಂಡಿದ್ದ ಆರೋಪಿ ಶಾರೀಕ್ ಮತ್ತು ಆಟೋರಿಕ್ಷಾ ಚಾಲಕ ಪುರುಷೋತ್ತಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಉಡುಪಿಯಲ್ಲಿ ಕುಕ್ಕರ್​ ಸ್ಫೋಟದ ಶಂಕಿತ ಉಗ್ರ ಶಾರಿಕ್ ಜಾಡು.. ಪೊಲೀಸರಿಂದ ತೀವ್ರ ತನಿಖೆ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.