ETV Bharat / state

Mangaluru crime: ಬಾಲಕಿ ಅಪಹರಣ ಪ್ರಕರಣ ಸುಖಾಂತ್ಯ; ಆರೋಪಿ ಬಂಧನ - Mangaluru crime

Kidnap case: ಅಪಹರಣವಾಗಿದ್ದ ಬಾಲಕಿಯನ್ನು ಪಣಂಬೂರು ಪೊಲೀಸರು ರಕ್ಷಣೆ ಮಾಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

Kidnapping of minor girl Case
ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ: ಆರೋಪಿ ಅರೆಸ್ಟ್
author img

By

Published : Aug 14, 2023, 8:02 PM IST

ಮಂಗಳೂರು: ಅಪಹರಣ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪಣಂಬೂರು ಪೊಲೀಸರು ಬಾಲಕಿಯನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಬೆಂಗ್ರೆ ಗ್ರಾಮದ ಕಸಬಾ ಬೆಂಗ್ರೆಯ ಮೊಹಮ್ಮದ್ ಸರ್ಫಾಝ್ (22) ಬಂಧಿತ ಆರೋಪಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್​ 10ರಂದು ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ವರದಿಯಾದ ಕೆಲವೇ ಗಂಟೆಗಳಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸೋಮಶೇಖರ್ ಜೆ.ಸಿ ನೇತೃತ್ವದ ಪೊಲೀಸ್ ತಂಡ ಬಾಲಕಿಯನ್ನು ಪತ್ತೆ ಹಚ್ಚಿದ್ದಾರೆ. ಆರೋಪಿ ಪಣಂಬೂರು ಠಾಣಾ ವ್ಯಾಪ್ತಿಯ ಕಸಬಾ ಬೆಂಗ್ರೆ ಎಂಬಲ್ಲಿಯ ನಿವಾಸಿಯಾಗಿದ್ದಾನೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆರೋಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಎರಡು, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎರಡು, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿ ಉಡುಪಿ ಜಿಲ್ಲೆ ಬೈಂದೂರು ಠಾಣೆ ಮತ್ತು ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದನು.

ಇತ್ತೀಚಿನ ಅಪಹರಣ ಪ್ರಕರಣ: ಚಿನ್ನದ ವ್ಯಾಪಾರಿಯನ್ನು ಕಾರುಸಮೇತ ಅಪಹರಿಸಿದ್ದ ಘಟನೆ ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ಜರುಗಿತ್ತು. ಶಿವು ಅಪಹರಣಕ್ಕೊಳಗಾದ ವ್ಯಕ್ತಿ. ಮೈಸೂರು ಕಡೆಯಿಂದ ಕೇರಳಕ್ಕೆ ಪ್ರಯಾಣಿಸುತ್ತಿದ್ದಾಗ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಹೊರಗೆಳೆದು ವ್ಯಾಪಾರಿಯನ್ನು ಅಪಹರಣ ಮಾಡಿದ್ದರು. ಕೇರಳ ಮೂಲದ ಐವರನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: Dowry case: ₹30 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು ಮದುವೆ ಮುಂದೂಡಿದ ವರ; ನೊಂದು ವಿಡಿಯೋ ಮಾಡಿಟ್ಟು ವಧು ಆತ್ಮಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.