ETV Bharat / state

ಮಂಗಳೂರು: ವೈದ್ಯರ ದಿನ ಕಾರ್ಯಕ್ರಮದಲ್ಲೇ ಕೋವಿಡ್ ನಿಯಮ ಉಲ್ಲಂಘನೆ, ದೂರು

ಮಂಗಳೂರಿನಲ್ಲಿ ನಡೆದ 'ಡಾಕ್ಟರ್ಸ್​​ ಡೇ' ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದು ಆಯೋಜಕರ ವಿರುದ್ದ ವೈದ್ಯರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

Mangaluru Doctors Day
ಮಂಗಳೂರು ಡಾಕ್ಟರ್ಸ್​ ಡೇ
author img

By

Published : Aug 1, 2021, 6:43 AM IST

ಮಂಗಳೂರು: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ಡಾಕ್ಟರ್ಸ್ ಡೇ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಜುಲೈ 19 ರಂದು ಮಂಗಳೂರಿನ ಐಎಂಎ ಭವನದಲ್ಲಿ ಡಾಕ್ಟರ್ಸ್​ ಡೇ ಆಯೋಜಿಸಲಾಗಿತ್ತು. ರಾಜ್ಯ ಐಎಂಎ ಅಧ್ಯಕ್ಷ ಡಾ.ಎಂ ವೆಂಕಟಾಚಲಪತಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸರಿಯಾಗಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ಕೊರೊನಾ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಡಾ.ಕಕ್ಕಿಲ್ಲಾಯ ನಗರದ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ: ಕಾಸರಗೋಡು-ಮಂಗಳೂರು ನಡುವೆ ಬಸ್ ಸಂಚಾರ ರದ್ದು

ವೈದ್ಯರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಯೇ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ವೈದ್ಯರು ದೂರಿನಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.