ಮಂಗಳೂರು: ಮಂಗಳೂರಿನಲ್ಲಿ ಹಿಂಸಾಚಾರ ನಡೆಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂಬ ವಿವಿಧ ಸಂಘಟನೆಗಳ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಿಐಡಿ ತನಿಖೆ ಬಳಿಕ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳು ಅವರ ಕರ್ತವ್ಯ ನಿರ್ವಹಿಸಿದ್ದಾರೆ. ಅಮಾನತು ಆಗಬೇಕೆಂಬ ಆಗ್ರಹದ ಬಗ್ಗೆ ಸಿಐಡಿ ತನಿಖೆ ಬಳಿಕ ನಿರ್ಧರಿಸಲಾಗುವುದು ಎಂದರು. ಮಂಗಳೂರಿನಲ್ಲಿ ಎಲ್ಲಾ ಸಮುದಾಯದವರ ಜೊತೆಗೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.