ETV Bharat / state

ಮಂಗಳೂರು ಹಿಜಾಬ್ ವಿವಾದದ ವಿಡಿಯೋ ವೈರಲ್ ಸುಳ್ಳು ಸುದ್ದಿ: ಪೊಲೀಸ್ ಆಯುಕ್ತ

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಗ್ಗೆ ಬೇರೆಡೆ ನಡೆದಿದ್ದ ಹಳೆಯ ವಿಡಿಯೋವನ್ನು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದೆ. ಇದು ನಗರದ ಯಾವುದೇ ಕಾಲೇಜಿನಲ್ಲಿ ನಡೆದ ಘಟನೆಯ ವಿಡಿಯೋ ಅಲ್ಲ ಎಂದು ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದರು.

Police Commissioner N  Shashikumar
ಪೊಲೀಸ್ ಆಯುಕ್ತ ಎನ್. ಶಶಿಕುಮಾರ್
author img

By

Published : Feb 15, 2022, 8:36 AM IST

ಮಂಗಳೂರು: ನಗರದ ಖಾಸಗಿ ಕಾಲೇಜಿಗೆ ಸಂಬಂಧಿಸಿದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಘಟನೆ ಎಂದು ವೈರಲ್ ಆಗುತ್ತಿರುವ ವಿಡಿಯೋಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತರು ಇದೊಂದು ಸುಳ್ಳು ಸುದ್ದಿ, ಸಾರ್ವಜನಿಕರು ಈ ಬಗ್ಗೆ ಆತಂಕಿತರಾಗಬಾರದು ಎಂದು ವದಂತಿಗೆ ತೆರೆ ಎಳೆದಿದ್ದಾರೆ.

ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಿನ್ನೆ(ಸೋಮವಾರ) ನಡೆದಿರುವ ಘಟನೆಯೆಂದು ಕೇಸರಿ ಹಾಗೂ ಹಿಜಾಬ್ ಬಗ್ಗೆ ವಿದ್ಯಾರ್ಥಿಗಳ ತಂಡಗಳ ನಡುವಿನ ಘೋಷಣೆಯ ವಿಡಿಯೋ ವೈರಲ್ ಆಗುತ್ತಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ತಕ್ಷಣ ಎಚ್ಚೆತ್ತ ಮಂಗಳೂರು ಪೊಲೀಸ್ ಆಯುಕ್ತರು ಈ ಬಗ್ಗೆ ವಿಡಿಯೋ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಎಲ್ಲವೂ ಶಾಂತಿಯುತವಾಗಿದ್ದು, ಹೈಕೋರ್ಟ್ ಆದೇಶದನುಸಾರ ಎಲ್ಲರೂ ಸಹಕರಿಸುತ್ತಿದ್ದಾರೆ. ಈ ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: 'ಹಿಜಾಬ್ ವಿವಾದವನ್ನು ವಿದ್ಯಾರ್ಥಿನಿಯರ ಮೂಲಕ ಆಡಿಸುತ್ತಿರುವ ಕೀಲಿಕೈ ಬೇರೆಯೇ ಇದೆ'

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.