ಮಂಗಳೂರು: ಲಾಡ್ಜ್ ರೂಂ ಬೆಡ್ಗೆ ಬೆಂಕಿ ತಗುಲಿ ಯುವಕ ಜೀವಂತ ದಹನವಾದ ಘಟನೆ ಕಂಕನಾಡಿಯ ರೆಸಿಡೆನ್ಸಿ ಗೇಟ್ ಲಾಡ್ಜ್ನಲ್ಲಿ ನಡೆದಿದೆ. ಬೆಂದೂರ್‌ವೆಲ್ ನಿವಾಸಿ ಯಶ್ ರಾಜ್ ಸುವರ್ಣ (43) ಮೃತರು.
ಯಶ್ ರಾಜ್ ಸುವರ್ಣ ನವೆಂಬರ್ 15ರಿಂದ ಹೋಟೆಲ್ನಲ್ಲಿ ವಾಸವಿದ್ದರು. ನಿನ್ನೆ ರಾತ್ರಿ ಊಟ ಮುಗಿಸಿ ರೂಂಗೆ ಹೋಗಿದ್ದಾರೆ. ರಾತ್ರಿ 12 ಗಂಟೆಯ ಹೊತ್ತಿಗೆ ರೂಂನಿಂದ ಹೊಗೆ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಬೆಂಕಿ ತಗುಲಿ ಅವರು ಸಾವನ್ನಪ್ಪಿದ್ದಾರೆ.
ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನೂ ಓದಿ: ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ