ETV Bharat / state

ಮಂಗಳೂರಿನಲ್ಲಿ ಬೈಕ್​ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶ ಕೆಲ ಗಂಟೆಗಳಲ್ಲೇ ವಾಪಸ್! - suratkal youth fazil murder case

ಮಂಗಳೂರಿನಲ್ಲಿ ಜಾರಿಗೊಳಿಸಲಾಗಿದ್ದ ಬೈಕ್​ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶ ಹಿಂಪಡೆಯಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

police-withdraws-ban-on-male-pillion-riders-during-night
ಮಂಗಳೂರಿನಲ್ಲಿ ಬೈಕ್​ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶ ಕೆಲ ಗಂಟೆಗಳಲ್ಲೇ ವಾಪಸ್
author img

By

Published : Aug 4, 2022, 6:04 PM IST

ಮಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾಳೆಯಿಂದ ಬೈಕ್​ನಲ್ಲಿ ಹಿಂಬದಿ ಯುವ ಪುರುಷ ಸವಾರರಿಗೆ ನಿರ್ಬಂಧಿಸಿದ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್​​ ಪಡೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದ ಬಳಿಕ ಜಾರಿಯಲ್ಲಿದ್ದ ರಾತ್ರಿ ನಿಷೇಧಾಜ್ಞೆಯು ನಾಳೆ ಬೆಳಿಗ್ಗೆ ತೆರವಾಗಲಿದೆ.

ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ನಡೆಸಿದ ಸಭೆಯ ಬಳಿಕ ರಾತ್ರಿ ಕರ್ಫ್ಯೂ ಸಡಿಲಿಕೆ ಬಳಿಕ ಬೈಕ್​​ನಲ್ಲಿ ಹಿಂಬದಿ ಯುವ ಪುರುಷ ಸವಾರರಿಗೆ ನಿರ್ಬಂಧ ವಿಧಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರಂತೆ ಸಂಜೆ 4 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರು ಆಗಸ್ಟ್​ 5ರಿಂದ ಆಗಸ್ಟ್ 8ರ ಬೆಳಗ್ಗೆವರೆಗೆ ಸಂಜೆ 6ರಿಂದ ಬೆಳಿಗ್ಗೆ 6ವರೆಗೆ 18 ವರ್ಷಕ್ಕೆ ಮೇಲ್ಪಟ್ಟ 60 ವರ್ಷದೊಳಗಿನ ಪುರುಷರ ಬೈಕ್​ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು.

ಆದರೆ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಈ ಆದೇಶವನ್ನು ಸಂಜೆ 5 ಗಂಟೆಯ ಮೊದಲೇ ವಾಪಸ್ ಪಡೆಯಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ರಾತ್ರಿ ಕರ್ಫ್ಯೂ ಸಡಿಲಿಕೆ: ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ. ಸಂಜೆ 6ರಿಂದ ಬೆಳಗ್ಗೆ 6ರವರೆಗೆ ರಾತ್ರಿ ನಿರ್ಬಂಧದ ಆದೇಶ ನಾಳೆ ಬೆಳಗ್ಗೆ 6 ಗಂಟೆಗೆ ಕೊನೆಗೊಳ್ಳಲಿದೆ. ನಾಳೆಯಿಂದ ರಾತ್ರಿ ನಿರ್ಬಂಧದಲ್ಲಿ ಸಡಿಲಿಕೆ ಮಾಡಲಾಗಿದ್ದು ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯವರೆಗೆ ಅಂಗಡಿ ತೆರೆಯಬಹುದಾಗಿದೆ. ಅದೇ ರೀತಿ ನಾಳೆಯಿಂದ ಸಂಜೆ 6 ಗಂಟೆಯವರೆಗೆ ಮದ್ಯದಂಗಡಿ ತೆರೆಯಲು‌ ಅವಕಾಶ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಇದನ್ನೂ ಓದಿ: ಪುತ್ತೂರಿನಲ್ಲಿ ಸಮಸ್ಯೆ ಇಲ್ಲ, ತರ್‍ಲೆ ಮಾಡುವವರ ವಿರುದ್ಧ ಕ್ರಮ: ಎಡಿಜಿಪಿ ಅಲೋಕ್ ಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.