ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನೋರ್ವನನ್ನು ಇಕೂನಾಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಪೊಲೀಸರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಅಸ್ಗರ್ ಅಲಿ(22) ಬಂಧಿತ ಆರೋಪಿ. ಅಸ್ಗರ್ ಅಲಿ ನಗರದ ಬಲ್ಮಠದ ಮೈದಾನ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಇಕನಾಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯಿಂದ 30 ಸಾವಿರ ರೂ. ಮೌಲ್ಯದ 2 ಕೆಜಿ ಗಾಂಜಾ ಸಹಿತ ಒಂದು ಮೊಬೈಲ್ ಫೋನ್‌ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೂ ಸ್ವಾಧೀನ ಪಡಿಸಿಕೊಳ್ಳಲಾದ ಸೊತ್ತಿನ ಮೌಲ್ಯ 30,630 ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಪಾಂಡೇಶ್ವರದ ಇಕೂನಾಮಿಕ್ ಅಂಡ್ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.