ಮಂಗಳೂರು: ಮಂಗಳೂರಿನ ಸುರತ್ಕಲ್ನಲ್ಲಿನ ಎನ್ಐಟಿಕೆ ಟೋಲ್ ಗೇಟ್ ತೆರವಿಗೆ 18ರಂದು ಹೋರಾಟದ ಸಿದ್ಧತೆ ನಡೆಯುತ್ತಿರುವ ನಡುವೆ 15ದಿನದಲ್ಲಿ ಸುರತ್ಕಲ್ ಟೋಲ್ ಗೇಟ್ ಸಮಸ್ಯೆ ಪರಿಹಾರವಾಗಲಿದೆ ಎಂದು ಭಾರತೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಎಂ.ಕೆ. ವತಾರೆ ಭರವಸೆ ನೀಡಿದ್ದಾರೆ.
ಸುರತ್ಕಲ್ನ ಎನ್ಐಟಿಕೆ ಟೋಲ್ ಗೇಟ್ ತೆರವು ಮಾಡಲು ಹೋರಾಟ ಸಮಿತಿ ನಿರ್ಧರಿಸಿದ್ದು, ಇದಕ್ಕಾಗಿ ತಯಾರಿಗಳನ್ನು ನಡೆಸುತ್ತಿದೆ. ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅ. 18ರಂದು ಟೋಲ್ ತೆರವು ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು ಹೋರಾಟ ಸಮಿತಿ ನೀಡಿದೆ.
ಇದರ ಮಧ್ಯೆ ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಹೆದ್ದಾರಿ ನಿರ್ಮಾಣ ಹಾಗೂ ನಿರ್ವಹಣೆಗಳಿಗೆ ಸಂಬಂಧಿಸಿದ ಸಭೆ ನಡೆದಿದೆ. ಈ ಸಭೆಯಲ್ಲಿ ಮಾತನಾಡಿದ ಭಾರತೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಎಂ.ಕೆ. ವತಾರೆ, ಸುರತ್ಕಲ್ ಟೋಲ್ ಗೇಟ್ನ ಸಮಸ್ಯೆ ಮುಂದಿನ 12ರಿಂದ 15 ದಿನಗಳೊಗೆ ಸಂಪೂರ್ಣವಾಗಿ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.
ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿ, ಬಹುದಿನಗಳಿಂದ ಇತ್ಯರ್ಥ ಪಡಿಸಲು ಯತ್ನಿಸುತ್ತಿದ್ದ ಸಮಸ್ಯೆ 15 ದಿನಗಳಲ್ಲಿ ಬಗೆಹರಿಯಲಿದೆ. ಅದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಮಾತನಾಡಿ, ಎನ್ಐಟಿಕೆ ಸುರತ್ಕಲ್ ನಿಂದ ನಂತೂರಿನವರೆಗೆ ರಸ್ತೆಗುಂಡಿಯಿಂದಾಗಿ ಅಪಘಾತಗಳು ಸಂಭವಿಸಿದರೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ಧ ಪ್ರಕರಣವನ್ನು ದಾಖಲಿಸಿ, ಅವರನ್ನು ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕೂಡಲೇ ಗುತ್ತಿಗೆದಾರರಿಗೆ ನೋಟಿಸ್ ನೀಡಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು, ಇಲ್ಲದಿದ್ದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಅಡ್ಡ ಹೊಳೆ-ಪೆರಿಯಡ್ಕ, ಬಿಕರ್ನ ಕಟ್ಟೆ ವ್ಯಾಪ್ತಿಯಲ್ಲಿ ಭೂಸ್ವಾದಿನಾಪಡಿಸಿಕೊಳ್ಳುವ ಬಗ್ಗೆ, ನಗರದೊಳಗೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಕೆಪಿಟಿ ಹಾಗೂ ನಂತೂರ್ ಜಂಕ್ಷನ್ಗಳಲ್ಲಿ ಕಾಮಗಾರಿ ಕೈಗೊಳ್ಳುವ ಬಗ್ಗೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರರು ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ಏಳನೇ ವೇತನ ಆಯೋಗ ರಚನೆ ಬಗ್ಗೆ ಸಿಎಂ ಘೋಷಣೆ