ETV Bharat / state

ಎಟಿಎಂಗೆ ಕನ್ನ ಹಾಕಲು ಯತ್ನ: ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ - ಎಟಿಎಂಗೆ ಕನ್ನ ಹಾಕಲು ಯತ್ನ ಆರೋಪಿ ಅರೆಸ್ಟ್​​

ಎಟಿಎಂ ಒಡೆದು ಹಣ ದೋಚಲು ಯತ್ನಿಸುತ್ತಿದ್ದ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

Thief attempting ATM theft caught red-handed
ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ
author img

By

Published : Feb 9, 2022, 12:11 PM IST

ಮಂಗಳೂರು: ಎಟಿಎಂಗೆ ಕನ್ನ ಹಾಕಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ.

ಕೊಪ್ಪಳ ಜಿಲ್ಲೆಯ ಬಚ್ಚನಲ್ಲಿಯ ಬೀರಪ್ಪ ಬಂಧಿತ ಆರೋಪಿ. ಈತ ರಾತ್ರಿ 2 ಗಂಟೆ ಸುಮಾರಿಗೆ ಮಂಗಳೂರಿನ ತೊಕ್ಕೊಟ್ಟು ಬಳಿಯ ಬರೋಡ ಬ್ಯಾಂಕ್​​ನ ಎಟಿಎಂಗೆ ತೆರಳಿದ್ದಾನೆ. ಬಳಿಕ ಎಟಿಎಂ ಅನ್ನು ತೆರೆಯಲು ಪ್ರಯತ್ನಿಸಿದ್ದು, ಇದು ಬ್ಯಾಂಕ್ ಸರ್ವಿಲೆನ್ಸ್ ಅಧಿಕಾರಿಗಳ ಗಮನಕ್ಕೆ ಬಂದಿದೆ. ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಆತ ಎಟಿಎಂಗೆ ಕನ್ನ ಹಾಕಲು ಯತ್ನಿಸಿದ್ದು, ಆದರೆ ಹಣ ತೆಗೆಯಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಉಳ್ಳಾಲ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಡ್ಯ: ಪ್ರಿಯಕರನಿಗಾಗಿ ಐವರ ಹತ್ಯೆಗೈದ ಕೊಲೆಗಾತಿ ಅರೆಸ್ಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.