ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ದಕ್ಷಿಣ ರೌಡಿ ನಿಗ್ರಹದಳದ ಪೊಲೀಸರು ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
ವಾಮಂಜೂರು ಆಶ್ರಯ ಕಾಲನಿ ನಿವಾಸಿ ಮಹಮ್ಮದ್ ಮುಸ್ತಫಾ (21), ಉಳಾಯಿಬೆಟ್ಟು ಆಚಾರಿಬೆಟ್ಟು ನಿವಾಸಿ ಹಸನ್ ಅಫ್ರಾನ್ ಯಾನೆ ಅಪ್ಪು (20), ಮೂಡುಶೆಡ್ಡೆ ಶಿವನಗರ ನಿವಾಸಿ ಫೈಜಲ್ (36) ಬಂಧಿತ ಆರೋಪಿಗಳು. ಆರೋಪಿಗಳಿಂದ ನಾಲ್ಕು ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಪೈಕಿ ಮುಸ್ತಫಾ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಪ್ರಕರಣ ಸೇರಿದಂತೆ ಮೂರು ಪ್ರಕರಣ, ಆರೋಪಿ ಫೈಜಲ್ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಕಳ್ಳತನ ಮತ್ತು ಗಾಂಜಾ ಮಾರಾಟ ಪ್ರಕರಣ ಈಗಾಗಲೇ ದಾಖಲಾಗಿದೆ.
ಈ ಪ್ರಕರಣದಲ್ಲಿ ಇನ್ನೂ ಕೆಲವರು ಶಾಮೀಲಾಗಿದ್ದು, ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.