ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರ‍್ಯಾಪಿಡ್ ಆರ್‌ಟಿ-ಪಿಸಿಆರ್ ಉಪಕರಣ ಅಳವಡಿಕೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ (ಆ.18) ಮಂಗಳೂರು-ಯುಎಇ ನಡುವೆ ವಿಮಾನ ಯಾನ ಆರಂಭಗೊಳ್ಳಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಯುಎಇ ನಾಗರಿಕ ವಿಮಾನಯಾನ ಪ್ರಾಧಿಕಾರವು ಮಂಗಳೂರಿನಿಂದ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿದ ತಕ್ಷಣ, ಮಂಗಳೂರು ವಿಮಾನ ನಿಲ್ದಾಣದಲ್ಲಿ ರ‍್ಯಾಪಿಡ್ ಆರ್‌ಟಿ-ಪಿಸಿಆರ್ ಉಪಕರಣ ಅಳವಡಿಕೆ ಮಾಡುವ ಪ್ರಕ್ರಿಯೆ ಆರಂಭಿಸಲಾಗಿತ್ತು. ಇಂದಿನಿಂದ ರ‍್ಯಾಪಿಡ್ ಆರ್‌ಟಿ-ಪಿಸಿಆರ್ ವ್ಯವಸ್ಥೆ ಕೂಡ ಅಧಿಕೃತವಾಗಿ ಪ್ರಾರಂಭವಾಗಲಿದೆ.
ಇದೀಗ ಉಪಕರಣ ಅಳವಡಿಸುವ ಮೂಲಕ ಅನಿವಾಸಿ ಕನ್ನಡಿಗರಿಗೆ ಆಗುತ್ತಿದ್ದ ಸಮಸ್ಯೆಗೆ ಪರಿಹಾರವಾದಂತಾಗಿದೆ. ಈಗಾಗಲೇ ಏರ್ ಇಂಡಿಯಾ ಎಕ್ಸ್ಪ್ರೆಸ್ ಬುಕ್ಕಿಂಗ್ ಆರಂಭಿಸಿದ್ದು, ಅನಿವಾಸಿ ಕನ್ನಡಿಗರು ಪ್ರಯಾಣಕ್ಕೆ ಉತ್ಸುಕರಾಗಿದ್ದಾರೆ.
ಇದನ್ನೂ ಓದಿ: ಮಗಳನ್ನು ದೂಧಗಂಗಾ ನದಿಗೆ ತಳ್ಳಿ ಕೊಂದ ಪಾಪಿ ತಂದೆ