ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ಗೆ ಅವಕಾಶ ನೀಡಬೇಡಿ: ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ - ಹಿಜಾಬ್ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರದಂತೆ ಕಟ್ಟುನಿಟ್ಟಿನ ನಿಯಮ ಪಾಲಿಸಬೇಕೆಂದು ನೂರಾರು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಹಿಜಾಬ್ಗೆ ನಿರ್ಬಂಧ ಇದ್ದರೂ ವಿದ್ಯಾರ್ಥಿನಿಯರು ಧರಿಸಿಕೊಂಡೇ ಬರುತ್ತಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ದೂರಿದರು.
ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ. ನಿಯಮದಂತೆ ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ. ಆದರೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಆದ್ದರಿಂದ ಹಿಜಾಬ್ ವಿರುದ್ಧ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಪ್ರಾಂಶುಪಾಲರು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಆದರೆ, ಅದು ಸಫಲವಾಗಲಿಲ್ಲ. ತಕ್ಷಣದಿಂದಲೇ ಹಿಜಾಬ್ ಧರಿಸಲು ಅವಕಾಶ ನೀಡಬಾರದು ಮತ್ತು ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸದ ವಿದ್ಯಾರ್ಥಿ ಸಂಘದ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ: SSLC ಪ್ರಶ್ನೆ ಪತ್ರಿಕೆ ಸೋರಿಕೆ, 8 ಜನ ಕಸ್ಟಡಿಗೆ: ಎಸ್ಪಿ ಸಂತೋಷ್ ಬಾಬು