ETV Bharat / state

ಕೇರಳದಲ್ಲಿ ಕೊರೊನಾ ಹೆಚ್ಚಳ: ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಲು DC ಸೂಚನೆ

author img

By

Published : Aug 3, 2021, 10:02 PM IST

ಮಂಗಳೂರು ವಿವಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಕೇರಳದ ಕಾಸರಗೋಡಿನಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೊರೊನಾ ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

mangaluru university graduation exams Postpone
ಕೇರಳದಲ್ಲಿ ಕೊರೊನಾ ಹೆಚ್ಚಳ: ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಕಟ್ಟೆಚ್ಚರ ವಹಿಸುವ ಹಿನ್ನೆಲೆಯಲ್ಲಿ ಸೋಮವಾರದಿಂದ ನಡೆಯುತ್ತಿರುವ ಮಂಗಳೂರು ವಿವಿ ಪದವಿ ಪರೀಕ್ಷೆಗಳನ್ನು ತಕ್ಷಣ ಮುಂದೂಡುವಂತೆ ವಿವಿಯ ಮೌಲ್ಯಮಾಪನದ ರಿಜಿಸ್ಟ್ರಾರ್‌ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ.

ಮಂಗಳೂರು ವಿವಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಕೇರಳದ ಕಾಸರಗೋಡಿನಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಕಾಸರಗೋಡಿನಿಂದ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಆದ್ದರಿಂದ ಸಂಭಾವ್ಯ ಅಪಾಯ ತಪ್ಪಿಸಲು ಗಡಿಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಸರಕಾರ ಸೂಚಿಸಿದ್ದು, ಆದೇಶ ಯಥಾವತ್ ಪಾಲಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ಮುಂದಿನ ಆದೇಶದವರೆಗೆ ತರಗತಿ ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರೀತ್ಸೆ ಅಂತಾ ಕಾಡಿದ್ದ ಪಾತಕಿ, ಆಕೆ ಒಪ್ಪದಿದ್ದಾಗ ಕೊನೆಗೆ ಪ್ರಾಣವನ್ನೇ ತೆಗೆದ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.