ETV Bharat / state

ಏ.10ರಂದು ಮಂಗಳೂರು ವಿವಿ ಘಟಿಕೋತ್ಸವ: ಕುಲಪತಿ ಯಡಪಡಿತ್ತಾಯ - ಮಂಗಳೂರು

ಮಂಗಳೂರು ವಿಶ್ವವಿದ್ಯಾನಿಲಯದ 39ನೇ ವಾರ್ಷಿಕ ಘಟಿಕೋತ್ಸವ ಏಪ್ರಿಲ್ 10 ರಂದು ನಡೆಯಲಿದೆ. ಈ ಬಾರಿ ಗೌರವ ಡಾಕ್ಟರೇಟ್ ನೀಡಲಾಗುವುದಿಲ್ಲ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ  ಹೇಳಿದರು.

mangaluru
ಮಂಗಳೂರು ವಿವಿ ಘಟಿಕೋತ್ಸವ
author img

By

Published : Apr 9, 2021, 8:55 AM IST

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 39ನೇ ವಾರ್ಷಿಕ ಘಟಿಕೋತ್ಸವ ಏಪ್ರಿಲ್ 10 ರಂದು ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ವಾರ್ಷಿಕ ಘಟಿಕೋತ್ಸವ ಏ.10 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಯವರು ವರ್ಚುವಲ್​ ಮುಖಾಂತರ ಮುಖ್ಯ ಅತಿಥಿಯಾಗಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ

ಈ ವರ್ಷದಲ್ಲಿ ಯಾವುದೇ ಗೌರವ ಡಾಕ್ಟರೇಟ್ ನೀಡಲಾಗುವುದಿಲ್ಲ. ಕೊರೊನಾ ಕಾರಣದಿಂದ ಗೌರವ ಡಾಕ್ಟರೇಟ್ ನೀಡಲು ಮಾಡಬೇಕಾದ ಕ್ರಮಗಳನ್ನು ಅನುಸರಿಸಲು ಆಗಿಲ್ಲ ಎಂದರು.

ಮಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ 117 ವಿದ್ಯಾರ್ಥಿಗಳಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್​ಡಿ) ನೀಡಲಾಗುತ್ತಿದೆ. ಇದರಲ್ಲಿ 14 ವಿದೇಶಿ ವಿದ್ಯಾರ್ಥಿಗಳಿದ್ದಾರೆ‌. ಒಂದು ಮಹಿಳಾ ಮತ್ತು 13 ಪುರುಷ ವಿದೇಶಿ ವಿದ್ಯಾರ್ಥಿಗಳು ಪದವಿ ಪಡೆದುಕೊಳ್ಳಲಿದ್ದಾರೆ. ಹತ್ತು ಮಂದಿಗೆ ಚಿನ್ನದ ಪದಕ, 101 ಮಂದಿಗೆ ನಗದು ಬಹುಮಾನ ಮತ್ತು 188 ವಿದ್ಯಾರ್ಥಿಗಳಿಗೆ ರ್ಯಾಂಕ್​ ನೀಡಲಾಗುತ್ತಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.