ಮಂಗಳೂರು: ಕಳೆದ ವರ್ಷ ಡಿ.19ರಂದು ನಡೆದ ಮಂಗಳೂರು ಗೋಲಿಬಾರ್ ಗೆ ಸಂಬಂಧಿಸಿದಂತೆ ಅಂತಿಮ ಮ್ಯಾಜಿಸ್ಟ್ರೀಯಲ್ ತನಿಖೆಯಲ್ಲಿ 45 ಮಂದಿ ಸಾರ್ವಜನಿಕರು ಸೇರಿ ಡಿಸಿ, ಎಸಿ, ಎಸಿಪಿ ಹಾಗೂ ಮೂವರು ವೈದ್ಯರನ್ನು ವಿಚಾರಣೆ ನಡೆಸಲಾಯಿತು.
ಮಂಗಳೂರು ಗೋಲಿಬಾರ್ ಪ್ರಕರಣ
ಈ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖಾಧಿಕಾರಿ ಜಿ.ಜಗದೀಶ್ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ವಿಚಾರಣೆಗಳನ್ನು ಇಂದು ಸಂಪೂರ್ಣಗೊಳಿಸಿದ್ದು, ಸರ್ಕಾರಕ್ಕೆ ಸಲ್ಲಿಸಲು ಅಂತಿಮ ವರದಿಯನ್ನು ಶೀಘ್ರದಲ್ಲೇ ಸಿದ್ಧಪಡಿಸಲಾಗುತ್ತದೆ. ಇಲ್ಲಿಯವರೆಗೆ 416 ಜನರನ್ನು ಮಾಜಿಸ್ಟ್ರೀಯಲ್ ವಿಚಾರಣೆ ಮಾಡಲಾಗಿದ್ದು, ಅವೆಲ್ಲಾ ದಾಖಲೆಗಳನ್ನು, ವಿಡಿಯೋ ತುಣುಕುಗಳನ್ನು ಪರಿಶೀಲನೆ ಮಾಡಬೇಕಾಗಿದೆ. ಆ ಬಳಿಕ ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಸಲಾಗುತ್ತದೆ. ಸರ್ಕಾರಕ್ಕೆ ಒಂದು ತಿಂಗಳ ಅವಧಿಯನ್ನು ಈ ತಿಂಗಳ 21ರವರೆಗೆ ವಿಸ್ತರಣೆ ಮಾಡಿದೆ. ಅಷ್ಟರಲ್ಲಿ ಈ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಹೇಳಿದರು.