ETV Bharat / state

ಡಿಕೆಶಿ ಮಂಗಳೂರು ಭೇಟಿ ಕಾರ್ಯಕ್ರಮಕ್ಕೆ ಭಾಗವಹಿಸಿದ ಪತ್ರಕರ್ತರು ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ - Dakshina Kannada DC kV rajendra

ಐವನ್ ಡಿಸೋಜ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಡಿಕೆಶಿ ಮಂಗಳೂರು ಭೇಟಿ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಎಲ್ಲಾ ಪತ್ರಕರ್ತರು ಸ್ವಯಂ ಕ್ವಾರಂಟೈನ್ ಗೆ ಒಳಗಾಗುವಂತೆ ಡಿಸಿ ಸೂಚನೆ ನೀಡಿದ್ದಾರೆ.

Rajendra
Rajendra
author img

By

Published : Aug 2, 2020, 3:51 PM IST

ಮಂಗಳೂರು: ವಿಧಾನ ಪರಿಷತ್ ಮಾಜಿ ಶಾಸಕ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಅವರು ಭಾಗವಹಿಸಿದ್ದ ಡಿಕೆಶಿ ಮಂಗಳೂರು ಭೇಟಿ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಎಲ್ಲಾ ಪತ್ರಕರ್ತರು ಸ್ವಯಂ ಕ್ವಾರಂಟೈನ್ ಗೆ ಒಳಗಾಗುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಐವನ್ ಡಿಸೋಜ ಅವರು ಜು.31ರಂದು ಗಂಟಲು ದ್ರವ ಮಾದರಿಯನ್ನು ತಪಾಸಣೆ ಮಾಡಿಸಿದ್ದರು. ಆ.1 ರಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಡಿ.31ರಂದು ಡಿಕೆಶಿ ಮಂಗಳೂರು ಪ್ರವಾಸ ಕಾರ್ಯಕ್ರಮದಲ್ಲಿ ಐವನ್ ಡಿಸೋಜ ಸಹ ಭಾಗವಹಿಸಿದ್ದರು. ಆದ್ದರಿಂದ ಅಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪತ್ರಕರ್ತರು ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಬೇಕು ಎಂದು ಡಿಸಿ ತಿಳಿಸಿದ್ದಾರೆ.

ಇನ್ನು ಪತ್ರಕರ್ತರು ತಮ್ಮ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಿ, ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಬರಬೇಕು. ಜೊತೆಗೆ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹೇಳಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.