ETV Bharat / state

ಶಕುಂತಳಾ ಶೆಟ್ಟಿಗೆ ಟಿಕೆಟ್ ನೀಡದಿದ್ದಲ್ಲಿ ಸಾಮೂಹಿಕ ರಾಜೀನಾಮೆ: ಬಂಡಾಯದ ಬಾವುಟ ಹಾರಿಸಿದ ಪುತ್ತೂರು ಮಹಿಳಾ ಕಾಂಗ್ರೆಸ್‌

ಬಿಜೆಪಿ ದ.ಕ. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮಹಿಳಾ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ, ಕಾಂಗ್ರೆಸ್​ ಮಹಿಳೆಯರಿಗೆ ಅವಕಾಶ ನೀಡಲು ಹಿಂದೇಟು ಹಾಕುತ್ತಿದೆ ಎಂದು ಕಾಂಗ್ರೆಸ್​ ಮಹಿಳಾ ಪದಾಧಿಕಾರಿಗಳು ದೂರು ನೀಡಿದ್ದಾರೆ.

Press conference from Puttur Mahila Congress
ಪುತ್ತೂರು ಮಹಿಳಾ ಕಾಂಗ್ರೆಸ್​ನಿಂದ ಸುದ್ದಿಗೋಷ್ಠಿ
author img

By

Published : Apr 12, 2023, 4:01 PM IST

Updated : Apr 12, 2023, 5:26 PM IST

ಪುತ್ತೂರು ಮಹಿಳಾ ಕಾಂಗ್ರೆಸ್​ನಿಂದ ಸುದ್ದಿಗೋಷ್ಠಿ

ಪುತ್ತೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್‌ ಮುಖಂಡೆ ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್‌ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್​ನ ಎಲ್ಲ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿಯೂ ಹಾಗೂ ಶಕುಂತಳಾ ಶೆಟ್ಟಿ ಅವರನ್ನು ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಾಯ ಮಾಡಲಾಗುವುದು ಎಂದು ಮಹಿಳಾ ಕಾಂಗ್ರೆಸ್‌ ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷೆ ಶಾರದ ಅರಸ್‌, ಮತ್ತು ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷೆ ವಿಶಾಲಕ್ಷಿ ಬನ್ನೂರು ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಪುತ್ತೂರು ಮಹಿಳಾ ಕಾಂಗ್ರೆಸ್‌ ಹೈ ಕಮಾಂಡ್‌ ವಿರುದ್ಧ ಬಂಡಾಯದ ಬಾವುಟ ಹಾರಿಸಿದೆ.

ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು "ಶಕುಂತಳಾ ಶೆಟ್ಟಿ ಅವರು ತಮ್ಮ ಶಾಸಕತ್ವದ ಅವಧಿಯಲ್ಲಿ ಮಹಿಳೆಯರ ಏಳಿಗೆಗಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಮಹಿಳೆಯರ ರಕ್ಷಣೆಗೆ ಮಹಿಳಾ ಪೊಲೀಸ್ ಠಾಣೆಯನ್ನು ಪುತ್ತೂರಿನಲ್ಲಿ ಆರಂಭಿಸಿದ್ದಾರೆ. ಮಹಿಳೆಯರು ಆರ್ಥಿಕವಾಗಿ ಬೆಳೆಯಲು, ಸ್ತ್ರೀ ಶಕ್ತಿ ಸಂಘಟನೆಗಳನ್ನು ಬಲಪಡಿಸಲು ಸ್ತ್ರೀ ಶಕ್ತಿ ಭವನದ ಸ್ಥಾಪನೆ ಮಾಡಿದ್ದಾರೆ. ಮಹಿಳೆಯರ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುವ ಮೂಲಕ ಶಕುಂತಳಾ ಶೆಟ್ಟಿ ಮಹಿಳೆಯರಿಗೆ ಭರವಸೆಯ ಆಶಾಕಿರಣವಾಗಿದ್ದಾರೆ ಎಂದು ಹೇಳಿದರು.

ಮಹಿಳಾ ಮತದಾರರಿಗೆ ಅವಮಾನ: ಬಿಜೆಪಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರಿಗೆ ಪುತ್ತೂರು ಮತ್ತು ಸುಳ್ಯದಲ್ಲಿ ಅವಕಾಶ ನೀಡಿದೆ. ಆದರೆ, ಕಾಂಗ್ರೆಸ್ ಪಕ್ಷ ಮಹಿಳೆಯರನ್ನು ಕಡೆಗಣಿಸುವ ಮೂಲಕ ಸುಳ್ಯ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಇರುವ ಮಹಿಳಾ ಮತದಾರರನ್ನು ಅವಮಾನಿಸುವ ಕೆಲಸದಲ್ಲಿ ತೊಡಗಿದೆ ಎಂದು ಅನಿಸುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಈ ವಿಷಯದ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.

ಒಂದು ವೇಳೆ, ಕಾಂಗ್ರೆಸ್​ ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್ ನಿರಾಕರಣೆ ಮಾಡಿದರೆ ಮಹಿಳಾ ಕಾಂಗ್ರೆಸ್ ಸಮಿತಿಯು ಸಾಮೂಹಿಕ ರಾಜೀನಾಮೆ ನೀಡವುದರ ಜೊತೆಗೆ, ಶಕುಂತಳಾ ಶೆಟ್ಟಿ ಅವರು ಪಕ್ಷೇತರವಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಒತ್ತಾಯಿಸಲಿದೆ ಎಂದು ಹೇಳಿದರು.

ಕಳೆದ ಜನವರಿಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್​ನ ಪರಮೋಚ್ಛ ನಾಯಕಿ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮಕ್ಕೆ ಶಕುಂತಳಾ ಶೆಟ್ಟಿ ಅವರ ನೇತೃತ್ವದಲ್ಲಿ ಮೂರು ಬಸ್​​ಗಳಲ್ಲಿ ಕಾರ್ಯಕರ್ತರು ಭಾಗವಹಿಸಿ ಸಮಾರಂಭದ ಯಶಸ್ಸಿಗೆ ತಮ್ಮದೇ ಕಾಣಿಕೆ ನೀಡಿದ್ದಾರೆ. ಅನುಭವಿ ನಾಯಕಿ ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿದರು. ಮಹಿಳಾ ಸಬಲೀಕರಣಕ್ಕಾಗಿಯೇ ಕಾರ್ಯಕ್ರಮ ಆಯೋಜಿಸಿರುವ ಪಕ್ಷ ಸಮರ್ಥ ಮಹಿಳೆಯರಿಗೆ ಟಿಕೆಟ್​ ನೀಡಬೇಕು ಎಂದು ಕಾಂಗ್ರೆಸ್‌ ಮುಖಂಡರುಗಳಾದ ವಿಲ್ಮಾ ಗೋನ್ಸಾಲ್ವಿಸ್‌, ಸುಧಾ ಕುಂಜತ್ತಾಯ, ಸೀತಾ ಭಟ್‌ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಇದನ್ನೂ ಓದಿ: ಪ್ರಚೋಧನಕಾರಿ ಭಾಷಣ ಆರೋಪ: ನಟಿ ಶೃತಿ ವಿರುದ್ಧ ಎಫ್​ಐಆರ್​ ದಾಖಲು

Last Updated : Apr 12, 2023, 5:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.