ETV Bharat / state

ಉದ್ದಿಮೆ ಪರವಾನಗಿ ಇಲ್ಲದೆ ವ್ಯಾಪಾರ: ಮನಪಾ ಆಯುಕ್ತ, ಮೇಯರ್ ದಿಢೀರ್ ದಾಳಿ - raid on without having licence shops

ಕಟ್ಟಡ ಪರವಾನಗಿ ಇಲ್ಲದೆ ಹಾಗೂ ಉದ್ದಿಮೆ ಪರವಾನಗಿ ನವೀಕರಿಸದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಂಗಡಿ ಮಳಿಗೆಗಳ ಮೇಲೆ ಮಂಗಳೂರು ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳು ದಾಳಿ ಮಾಡಿ ವ್ಯಾಪಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

MCC raid  shops which is running without licence
ಮನಪಾ ಆಯುಕ್ತ, ಮೇಯರ್ ದಿಢೀರ್ ದಾಳಿ
author img

By

Published : Nov 8, 2020, 5:55 PM IST

ಮಂಗಳೂರು: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಿಗೆ, ಉದ್ದಿಮೆ ಪರವಾನಗಿ ಇಲ್ಲದೆ ಹಾಗೂ ಉದ್ದಿಮೆ ಪರವಾನಗಿ ನವೀಕರಿಸದೆ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವ ಮಳಿಗೆಗೆ ದಿಢೀರ್ ದಾಳಿ ನಡೆಸಲಾಗಿದೆ.

ದಾಳಿ ನಡೆಸಿದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಮೇಯರ್ ದಿವಾಕರ ಪಾಂಡೇಶ್ವರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾಲಿಕೆ ಆಯುಕ್ತರು, ಮೇಯರ್ ಹಾಗೂ ಅಧಿಕಾರಿಗಳ ತಂಡ ಇಂದು ಬೆಳಗ್ಗೆ ನಗರದ ಹಲವು ಅಂಗಡಿಗಳ ಮೇಳೆ ದಿಢೀರ್ ದಾಳಿ ನಡೆಸಿದ್ದು, ಹಲವಾರು ಮಂದಿ ಉದ್ದಿಮೆ ಪರವಾನಗಿ ಇಲ್ಲದೆ ವ್ಯಾಪಾರ ವಹಿವಾಟು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ‌.

ಹಲವಾರು ಕಟ್ಟಡಗಳ ದಾಖಲೆಗಳನ್ನು ಪರಿಶೀಲಿಸಿದ ಮೇಯರ್ ದಿವಾಕರ ಅವರು ಅನಧಿಕೃತ ಕಟ್ಟಡಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.