ETV Bharat / state

ಎಮ್.ಡಿ.ಎಮ್ ನಿಷೇಧಿತ ಮಾದಕ ದ್ರವ್ಯ ಮಾರಾಟ: ಇಬ್ಬರು ಆರೋಪಿಗಳ ಬಂಧನ - drug sales news of mangalore

ಎಮ್.ಡಿ.ಎಮ್ ನಿಷೇಧಿತ ಮಾದಕ ದ್ರವ್ಯವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಟ್ಟ ಹಾಕುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಎಮ್.ಡಿ.ಎಮ್ ನಿಷೇಧಿತ ಮಾದಕ ದ್ರವ್ಯ ಮಾರಾಟ: ಇಬ್ಬರು ಆರೋಪಿಗಳ ಬಂಧನ
author img

By

Published : Sep 20, 2019, 10:46 PM IST

ಮಂಗಳೂರು: ಎಮ್.ಡಿ.ಎಮ್ ನಿಷೇಧಿತ ಮಾದಕ ದ್ರವ್ಯವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಟ್ಟ ಹಾಕುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುರತ್ಕಲ್‌ ಕೃಷ್ಣಾಪುರ 6ನೇ ಬ್ಲಾಕ್ ನಿವಾಸಿ‌ ಮೊಹಮ್ಮದ್ ಮುಜಾಮಿಲ್ (40), ಚೊಕ್ಕಬೆಟ್ಟುವಿನ ಪರಮೇಶ್ವರಿ ನಗರ ನಿವಾಸಿ ಮೊಹಮ್ಮದ್ ಶರೀಫ್ ಸಿದ್ದಿಕ್(40) ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸ್ ನಿರೀಕ್ಷಕ ಮತ್ತು ವಿಶೇಷ ಅಪರಾಧ ಪತ್ತೆ ದಳದ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಆರೋಪಿಗಳ ಕಾರು ಪರಿಶೀಲಿಸಿದಾಗ ಮಾನವ ಜೀವಕ್ಕೆ ಅಪಾಯ ತಂದೊಡ್ಡುವ ಎಮ್.ಡಿ.ಎಮ್ ಎಂಬ ನಿಷೇಧಿತ ಮಾದಕ ದ್ರವ್ಯ ಇರುವುದು ಖಾತರಿಯಾಗಿದೆ.

ಆರೋಪಿಗಳಿಂದ 4 ಲಕ್ಷ ರೂ ಮೌಲ್ಯದ ಕಾರು, ಅಂದಾಜು‌ ಮೌಲ್ಯ 30 ಸಾವಿರ ರೂ.ನ 11 ಗ್ರಾಂ ಎಂಡಿಎಂ ಮಾದಕ ದ್ರವ್ಯ, 10,950 ರೂ. ನಗದು, 21ಸಾವಿರ ರೂ. ಮೌಲ್ಯದ ನಾಲ್ಕು ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ‌. ಒಟ್ಟು 4,61,950 ರೂ. ಮೌಲ್ಯದ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Intro:ಮಂಗಳೂರು: ಎಮ್.ಡಿ.ಎಮ್ ನಿಷೇಧಿತ ಮಾದಕ ದ್ರವ್ಯವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಸುರತ್ಕಲ್ ಲೈಟ್ ಹೌಸ್ ಬಳಿ ಇರುವ ಗೆಸ್ಟ್ ಹೌಸ್ ರಸ್ತೆಯ ಬದಿ ಕಾರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಇಂದು ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್, ಕೃಷ್ಣಾಪುರ 6ನೇ ಬ್ಲಾಕ್ ನಿವಾಸಿ‌ ಮೊಹಮ್ಮದ್ ಮುಜಾಮಿಲ್ (40), ಸುರತ್ಕಲ್, ಕೃಷ್ಣಾಪುರ, ಚೊಕ್ಕಬೆಟ್ಟುವಿನ ಪರಮೇಶ್ವರಿ ನಗರ ನಿವಾಸಿ ಮೊಹಮ್ಮದ್ ಶರೀಫ್ ಸಿದ್ದಿಕ್(40) ಬಂಧಿತ ಆರೋಪಿಗಳು.

ಖಚಿತ ಮಾಹಿತಿಯ ಮೇರೆಗೆ
ಸುರತ್ಕಲ್ ಪೊಲೀಸ್ ನಿರೀಕ್ಷಕ ಮತ್ತು ವಿಶೇಷ ಅಪರಾಧ ಪತ್ತೆದಳದ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರನ್ನು ಪರಿಶೀಲಿಸಿದಾಗ ಮಾನವ ಜೀವಕ್ಕೆ ಅಪಾಯವನ್ನು ತಂದೊಡ್ಡುವಂತಹ ಎಮ್.ಡಿ.ಎಮ್. ಎಂಬ ನಿಷೇಧಿತ ಮಾದಕ ದ್ರವ್ಯ ಇರುವುದಾಗಿ ಖಾತರಿಯಾಗಿದೆ. ಸ್ಥಳಕ್ಕೆ ಪಂಚರನ್ನು ಬರಮಾಡಿಕೊಂಡು ಇವರ ಸಮಕ್ಷಮ ಎಸಿಪಿ ಶ್ರೀನಿವಾಸ ಗೌಡ ಆರ್. ರವರ ನೇತೃತ್ವದ ವಿಶೇಷ ಅಪರಾಧ ಪತ್ತೆ ದಳ ಮತ್ತು ಸುರತ್ಕಲ್ ಪೊಲೀಸರ ಜಂಟಿ ಕಾರ್ಯಚರಣೆ ನಡೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅವರಲ್ಲಿದ್ದ ನಿಷೇಧಿತ ಮಾದಕ ದ್ರವ್ಯ(ಎಮ್.ಡಿ.ಎಮ್) ವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳು ನಿಷೇಧಿತ ಮಾದಕ ವಸ್ತುವನ್ನು ಮುಂಬೈನಿಂದ ತಂದು ಮಾರಾಟ ಮಾಡುವುದಾಗಿ ವಿಚಾರಣೆ ವೇಳೆ ತಿಳಿಸಿರುತ್ತಾರೆ.

Body:ಪೊಲೀಸರು ಆರೋಪಿಗಳಿಂದ 4 ಲಕ್ಷ ರೂ. ಮೌಲ್ಯದ ಕಾರು, ಅಂದಾಜು‌ ಮೌಲ್ಯ 30 ಸಾವಿರ ರೂ.ನ 11 ಗ್ರಾಂ ಎಂಡಿಎಂ ಮಾದಕ ದ್ರವ್ಯ, 10,950 ರೂ. ನಗದು, 21ಸಾವಿರ ರೂ. ಮೌಲ್ಯದ ನಾಲ್ಕು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ‌. ಸ್ವಾಧೀನಪಡಿಸಿಕೊಂಡ ಒಟ್ಟು ಸೊತ್ತಿನ ಅಂದಾಜು ಮೌಲ್ಯ 4,61,950 ರೂ. ಆಗಿರುತ್ತದೆ.

ಪಣಂಬೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ ಗೌಡರವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ನಿರೀಕ್ಷಕ ರಾಮಕೃಷ್ಣ ಮತ್ತು ಉತ್ತರ ಉಪವಿಭಾಗದ ವಿಶೇಷ ಅಪರಾಧ ಪತ್ತೆ ದಳದ ಅಧಿಕಾರಿಯಾದ ಮೊಹಮ್ಮದ್, ಕುಶಲ ಮಣಿಯಾಣಿ, ವಿಜಯ್ ಕಾಂಚನ್, ಸತೀಶ್ ಎಮ್., ಇಸಾಕ್ ಅಹಮ್ಮದ್ ಮತ್ತು ಶರಣ್ ಕಾಳಿ ಹಾಗೂ ಸುರತ್ಕಲ್ ಪೊಲೀಸ್ ಠಾಣಾ ಸಿಬ್ಬಂದಿ ಪತ್ತೆಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.