ETV Bharat / state

ಎಂಡಿಎಂಎ ಮಾದಕದ್ರವ್ಯ ಮಾರಾಟ ಜಾಲ ಪತ್ತೆ: ಮೂವರ ಬಂಧನ - undefined

ನಗರದ ಬೀಚ್‌ಗಳಲ್ಲಿ ಎಂಡಿಎಂಎ ಎಂಬ ಮಾದಕದ್ರವ್ಯವನ್ನು ಮಾರಾಟ ಮಾಡುತ್ತಿದ್ದ ಮೂವರನ್ನು ಪಣಂಬೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಮೂವರ ಬಂಧನ
author img

By

Published : Jul 19, 2019, 10:43 PM IST

ಮಂಗಳೂರು: ನಗರದ ಬೀಚ್‌ಗಳಲ್ಲಿ ಎಂಡಿಎಂಎ ಎಂಬ ಮಾದಕದ್ರವ್ಯವನ್ನು ಮಾರಾಟ ಮಾಡುವ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದು, ಮೂವರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತನ್ನು ಜಪ್ತಿ ಮಾಡಿದ್ದಾರೆ.

ಉಳ್ಳಾಲ ಒಳಪೇಟೆ ನಿವಾಸಿ ಅಬೂಬಕರ್ ಮಿಸ್ಬಾ (24), ಸೋಮೇಶ್ವರ ಪೆರ್ಮನ್ನೂರು ನಿವಾಸಿ ಶಬ್ಬೀರ್ ಅಹಮ್ಮದ್ ಯಾನೆ ಶಬ್ಬೀರ್ (27), ಉಳ್ಳಾಲ ಅಲೇಕಳ ನಿವಾಸಿ ಶಿಹಾಬ್ ಅಬ್ದುಲ್ ರಝಾಕ್ (27) ಬಂಧಿತ ಆರೋಪಿಗಳು.

ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವಿಶೇಷ ಅಪರಾಧ ಪತ್ತೆದಳ ತಂಡವು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವಿಶೇಷ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಈ ಮೂವರು ಆರೋಪಿಗಳು ಮುಂಬೈಗೆ ತೆರಳಿ ಅಲ್ಲಿಂದ ಎಂಡಿಎಂಎ ಮಾದಕದ್ರವ್ಯ ಖರೀದಿಸಿ ಮಂಗಳೂರಿಗೆ ಸಾಗಾಟ ಮಾಡಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೂ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಮಂಗಳೂರು ನಗರ, ಉಳ್ಳಾಲ, ಪಣಂಬೂರು ಮತ್ತು ಇತರ ಬೀಚ್ ಪರಿಸರದಲ್ಲಿ ಮಾದಕದ್ರವ್ಯವನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಇಂದು ಬೈಕಂಪಾಡಿಯಿಂದ ಕೂರಿಕಟ್ಟ ಕಡೆಗೆ ಹೋಗುವ ಕಾಂಕ್ರಿಟ್ ರಸ್ತೆಯಲ್ಲಿ ಸ್ಕೂಟರ್​ನಲ್ಲಿ ಮಾದಕದ್ರವ್ಯ ಮಾರಾಟ ಮಾಡಲು ಯೋಜನೆ ರೂಪಿಸಿದ್ದರು. ಈ ಸಂದರ್ಭ ಪೊಲೀಸರು ಏಕಾಏಕಿ ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಲು ಯತ್ನಿಸಿದರಾದರು, ಪೊಲೀಸರು ಅವರನ್ನು ವಶಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಬಂಧಿತ ಆರೋಪಿಗಳಿಂದ 80 ಸಾವಿರ ರೂ. ಮೌಲ್ಯದ 16.55 ಗ್ರಾಂ ತೂಕದ ‘ಎಂಡಿಎಂಎ’ ಮಾದಕ ದ್ರವ್ಯ, 25 ಸಾವಿರ ಮೌಲ್ಯದ ಜ್ಯುಪಿಟರ್ ಸ್ಕೂಟರ್, ಎರಡು ಸಾವಿರ ರೂ. ಮೌಲ್ಯದ ನಾಲ್ಕು ಮೊಬೈಲ್‌ಗಳು ಹಾಗೂ 3,200 ರೂ. ನಗದು ವಶಕ್ಕೆ ಪಡೆಸಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,10,200 ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟಿಲ್ ನಿರ್ದೇಶನದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ ಆರ್.ಗೌಡ ನೇತೃತ್ವದಲ್ಲಿ ಪಣಂಬೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಅಜ್ಮತ್ ಅಲಿ, ಮಂಗಳೂರು ಉತ್ತರ ಉಪ ವಿಭಾಗದ ವಿಶೇಷ ಅಪರಾದ ಪತ್ತೆ ದಳದ ಅಧಿಕಾರಿ ಎಎಸ್​ಐ ಮಹಮ್ಮದ್, ಸಿಬ್ಬಂದಿ ಕುಶಲ ಮಣಿಯಾಣಿ, ಸತೀಶ್ ಎಂ. ಇತರ ಪಣಂಬೂರು ಠಾಣಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Intro:ಮಂಗಳೂರು: ನಗರದ ಬೀಚ್‌ಗಳಲ್ಲಿ ಎಂಡಿಎಂಎ ಎಂಬ ಮಾದಕದ್ರವ್ಯವನ್ನು ಮಾರಾಟ ಮಾಡುವ ಜಾಲವನ್ನು ಇಂದು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಲಕ್ಷಾಂತರ ಮೌಲ್ಯದ ಸೊತ್ತು ಸಹಿತ ಮೂವರನ್ನು ಬಂಧಿಸಿದ್ದಾರೆ.

ಉಳ್ಳಾಲ ಒಳಪೇಟೆ ನಿವಾಸಿ ಅಬೂಬಕರ್ ಮಿಸ್ಬಾ (24), ಸೋಮೇಶ್ವರ ಪೆರ್ಮನ್ನೂರು ನಿವಾಸಿ ಶಬ್ಬೀರ್ ಅಹಮ್ಮದ್ ಯಾನೆ ಶಬ್ಬೀರ್ (27), ಉಳ್ಳಾಲ ಅಲೇಕಳ ನಿವಾಸಿ ಶಿಹಾಬ್ ಅಬ್ದುಲ್ ರಝಾಕ್ (27) ಬಂಧಿತ ಆರೋಪಿಗಳು.

ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವಿಶೇಷ ಅಪರಾಧ ಪತ್ತೆದಳ ತಂಡವು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವಿಶೇಷ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ.

ಈ ಮೂವರು ಆರೋಪಿಗಳು ಮುಂಬೈಗೆ ತೆರಳಿ ಅಲ್ಲಿಂದ ಎಂಡಿಎಂಎ ಮಾದಕದ್ರವ್ಯ ಖರೀದಿಸಿ ಮಂಗಳೂರಿಗೆ ಸಾಗಾಟ ಮಾಡಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೂ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಮಂಗಳೂರು ನಗರ, ಉಳ್ಳಾಲ, ಪಣಂಬೂರು ಮತ್ತು ಇತರ ಬೀಚ್ ಪರಿಸರದಲ್ಲಿ ಮಾದಕದ್ರವ್ಯವನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Body:ಆರೋಪಿಗಳು ಇಂದು ಬೈಕಂಪಾಡಿಯಿಂದ ಕೂರಿಕಟ್ಟ ಕಡೆಗೆ ಹೋಗುವ ಕಾಂಕ್ರಿಟ್ ರಸ್ತೆಯಲ್ಲಿ ಸ್ಕೂಟರ್ ಸಹಿತ ಮಾದಕದ್ರವ್ಯ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದರು. ಈ ಸಂದರ್ಭ ಪೊಲೀಸರು ಏಕಾಏಕಿ ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಲು ಯತ್ನಿಸಿದರೂ, ಪೊಲೀಸರು ಅವರನ್ನು ವಶಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಬಂಧಿತ ಆರೋಪಿಗಳಿಂದ 80 ಸಾವಿರ ರೂ. ಮೌಲ್ಯದ 16.55 ಗ್ರಾಂ ತೂಕದ ‘ಎಂಡಿಎಂಎ’ ಮಾದಕ ದ್ರವ್ಯ, 25 ಸಾವಿರ ಮೌಲ್ಯದ ಜ್ಯುಪಿಟರ್ ಸ್ಕೂಟರ್, ಎರಡು ಸಾವಿರ ರೂ. ಮೌಲ್ಯದ ನಾಲ್ಕು ಮೊಬೈಲ್‌ಗಳು ಹಾಗೂ 3,200 ರೂ. ನಗದು ವಶಕ್ಕೆ ಪಡೆಸಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,10,200 ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟಿಲ್ ನಿರ್ದೇಶನದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ ಆರ್.ಗೌಡ ನೇತೃತ್ವದಲ್ಲಿ ಪಣಂಬೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಅಜ್ಮತ್ ಅಲಿ, ಮಂಗಳೂರು ಉತ್ತರ ಉಪವಿಭಾಗದ ವಿಶೇಷ ಅಪರಾದ ಪತ್ತೆ ದಳದ ಅಧಿಕಾರಿ ಎಎಸ್ಸೈ ಮುಹಮ್ಮದ್, ಸಿಬ್ಬಂದಿ ಕುಶಲ ಮಣಿಯಾಣಿ, ಸತೀಶ್ ಎಂ., ವಿಜಯ ಕಾಂಚನ್, ಇಸಾಕ್, ಶರಣ್ ಕಾಳಿ ಹಾಗೂ ಮಂಗಳೂರು ನಗರ ಸಿಸಿಬಿ ಘಟಕದ ಪೊಲೀಸ್ ಉಪನಿರೀಕ್ಷಕ ಕಬ್ಬಾಳ್‌ರಾಜ್, ಎಎಸ್ಸೈಗಳಾದ ಮೋಹನ್ ಶೆಟ್ಟಿಯಾರ್, ಹರೀಶ್ ಮತ್ತು ಸಿಬ್ಬಂದಿ ಚಂದ್ರಶೇಖರ, ಜಬ್ಬಾರ್, ರಾಜಾ, ಮಣಿ, ಯೋಗೀಶ್, ನೂತನ್ ಹಾಗೂ ವಿಶ್ವ ಪೂಜಾರಿ ಹಾಗೂ ಪಣಂಬೂರು ಠಾಣಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.