ಮಂಗಳೂರು: ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಮಂಗಳೂರು ಹೊರವಲಯದಲ್ಲಿರುವ ಮುಕ್ಕದ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ನ ಸ್ನಾತಕೋತ್ತರ (ಎಂ ಎಸ್) ವಿದ್ಯಾರ್ಥಿ ಮೃತಪಟ್ಟವರು.
26 ವರ್ಷದ ಈ ವೈದ್ಯ ವಿದ್ಯಾರ್ಥಿ ಹತ್ತು ದಿನಗಳ ಹಿಂದಷ್ಟೇ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ನಲ್ಲಿ ಎಂಎಸ್ ಪದವಿಗೆ ಸೇರ್ಪಡೆಗೊಂಡಿದ್ದರು. ಕುಂದಾಪುರ ಮೂಲದ ಇವರಿಗೆ ಮೂರು ದಿನಗಳ ಹಿಂದಷ್ಟೇ ಪಾಸಿಟಿವ್ ದೃಢಪಟ್ಟಿತ್ತು.
ಮೂರು ದಿನಗಳಿಂದಲೂ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.