ETV Bharat / state

ಮಂಗಳೂರು: ಸರ್ಕಾರಿ ಕಚೇರಿಗಳಲ್ಲಿನ‌ ಸಮಸ್ಯೆ ನಿವಾರಣೆ ಕುರಿತು ಸಭೆ - ದ.ಕ.ಜಿಲ್ಲಾ ಕಾರ್ಯದರ್ಶಿ ಪೊನ್ನುರಾಜ್

ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳು, ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ನೆಟ್ ವರ್ಕ್ ಸಮಸ್ಯೆ‌ ಸೇರಿದಂತೆ ಅನೇಕ ಸಮಸ್ಯೆಗಳ ಕುರಿತು ದ.ಕ.ಜಿಲ್ಲಾ ಕಾರ್ಯದರ್ಶಿ ಪೊನ್ನುರಾಜ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

Meeting
Meeting
author img

By

Published : Oct 12, 2020, 5:23 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ನಿವಾರಣೆ ಕುರಿತು ದ.ಕ.ಜಿಲ್ಲಾ ಕಾರ್ಯದರ್ಶಿ ಪೊನ್ನುರಾಜ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಜನರಿಗಾಗುವ ತೊಂದರೆಗಳು, ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ನೆಟ್ ವರ್ಕ್ ಸಮಸ್ಯೆ, ಮರಳು, ಯು.ಜಿ.ಡಿ ಸಮಸ್ಯೆ, ಅಗ್ನಿಶಾಮಕ ದಳದ ಕೊರತೆ, ಗಣಿ ಅಧಿಕಾರಿಗಳಿಂದ ಆಗುವ‌ ತೊಂದರೆಗಳು, ಘನತ್ಯಾಜ್ಯ ಸಮಸ್ಯೆ. ನಗರದಲ್ಲಿ ಕಿಯೋನಿಕ್ಸ್ ಪ್ರಾಯೋಜಿತ ಐ.ಟಿ ಪಾರ್ಕ್ ಸ್ಥಾಪಿಸುವುದು ಮುಂತಾದವುಗಳ ಕುರಿತು ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮುಲ್ಕಿ ಮೂಡುಬಿದಿರೆ ಶಾಸಕ ಉಮನಾಥ್ ಕೋಟ್ಯಾನ್, ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.