ಬಂಟ್ವಾಳ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ತಯಾರಿ ಕುರಿತು ಇಲಾಖೆ ಅಧಿಕಾರಿಗಳ ಜೊತೆ ಮಂಗಳೂರು ಶಾಸಕ ಯು.ಟಿ.ಖಾದರ್ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳೊಂದಿಗೆ ಬರುವ ಪೋಷಕರಿಗೆ ತಂಗಲು ಸೂಕ್ತ ವ್ಯವಸ್ಥೆ ಮಾಡಬೇಕು, ಗಡಿಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ನಂತರ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಸರ್ಕಾರದ ಸುತ್ತೋಲೆಯಂತೆ ಪರೀಕ್ಷೆ ನಡೆಯುವ ಕೇಂದ್ರದ ಸುತ್ತಲೂ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಇರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಭಯಪಡುವ ಅಗತ್ಯವಿಲ್ಲ ಎಂದರು.
ಪರೀಕ್ಷೆಯ ವ್ಯವಸ್ಥೆಯ ಬಗ್ಗೆ ತಹಶೀಲ್ದಾರ್ ಕಚೇರಿಯಲ್ಲಿ ಜೂನ್ 15 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.