ಮಂಗಳೂರು: ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಮಲಗಿದ್ದ ಪತಿಯ ತಲೆಯನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಎಲಿಯಮ್ಮ(56) ಹತ್ಯೆ ಮಾಡಿದ ಆರೋಪಿಯಾಗಿದ್ದು, ಮೃತ ವ್ಯಕ್ತಿಯನ್ನು ಯೋಹನಾನ್ ಯಾನೆ ಬೇಬಿ ಎಂದು ಗುರುತಿಸಲಾಗಿದೆ.
ಹತ್ಯೆಯಾದ ಯೋಹನಾನ್ ಅವರ ಹೆಂಡತಿ ಎಲಿಯಮ್ಮ ಕಳೆದ ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಆಕೆಗೆ ಮಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಎಲಿಯಮ್ಮ ಇಂದು ಬೆಳಗ್ಗೆ 5.30 ರ ಸುಮಾರಿಗೆ ತನ್ನ ಕೋಣೆಯಲ್ಲಿ ಮಲಗಿದ್ದ ಗಂಡ ಯೋಹನಾನ್ ತಲೆಯ ಭಾಗಕ್ಕೆ ಕತ್ತಿಯಿಂದ ಕಡಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ಯೋಹನಾನ್ ಸ್ಥಳದಲ್ಲಿ ಸಾವನ್ನಪ್ಪಿದ್ದು, ಸದ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ : ಖುಂತಿ ಎಸ್‌ಡಿಒ ವಿರುದ್ಧ ಎಫ್ಐಆರ್