ಬಂಟ್ವಾಳ: ಎರಡು ತಿಂಗಳಿಂದ ವೇತನ ನೀಡಲ್ಲ. ಈ ಸಂಬಂಧ ಜನಪ್ರತಿನಿಧಿಗಳನ್ನು ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಮೆಸ್ಕಾಂ ಕಾರ್ಮಿಕರು ಹಾಗೂ ದಲಿತ್ ಸೇವಾ ಸಮಿತಿ ಜಂಟಿಯಾಗಿ ಮೆಸ್ಕಾಂ ಭವನದ ಎದುರು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದರು.
ಕೂಡಲೇ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು. ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ನೇತೃತ್ವ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಇಂಟೆಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಕಾಂಗ್ರೆಸ್ ಮುಖಂಡ ವೆಂಕಪ್ಪ ಪೂಜಾರಿ ಪಾಲ್ಗೊಂಡಿದ್ದರು.
ಹಿಂದಿನ ಗುತ್ತಿಗೆದಾರರಿಂದ ಸರಿಯಾದ ಸೌಲಭ್ಯ ದೊರಕುತ್ತಿತ್ತು. ಈಗ ಏಕಾಏಕಿ ಸಂಬಳ ಕಡಿತ ಹಾಗೂ ಕೆಲಸದಿಂದ ತೆಗೆದುಹಾಕುವ ವಾತಾವರಣ ನಿರ್ಮಾಣವಾಗಿದೆ. ಸಂಕಷ್ಟದ ಸಮಯದಲ್ಲಿ ಮೀಟರ್ ರೀಡರ್ಗಳ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದರು.