ಬೆಳ್ತಂಗಡಿ: ಅನ್ಯಕೋಮಿನ ಜನರ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ನಂತರ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಆರೋಪಿ ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ. ನೇತೃತ್ವದ ಪೊಲೀಸರ ತಂಡ, ಇಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ಎಂಬ ವ್ಯಕ್ತಿ ಆಗಸ್ಟ್ 5 ರ ರಾಮಮಂದಿರ ಭೂಮಿ ಪೂಜೆಯಂದು ನೀತಿ ಸಂಹಿತೆ ಉಲ್ಲಂಘಿಸಿ ಪಟಾಕಿ ಸಿಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಅನ್ಯಕೋಮಿನ ವಿರುದ್ಧ ರಘುರಾಮು ಶೆಟ್ಟಿ ವಾಟ್ಸ್ಆ್ಯಪ್ನಲ್ಲಿ ಸಂದೇಶ ರವಾನಿಸಿದ್ದ ಎನ್ನಲಾಗಿದೆ.