ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್ ಮುಂದೆ ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಪುತ್ರನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಗುಲ್ಜಾರ್ ಬಾನು ಅವರ ಪುತ್ರ ಅಜೀಂ ಬಂಧಿತ ಆರೋಪಿ.
ಇದನ್ನು ಓದಿ:ಜೆಡಿಎಸ್ನಿಂದ ಬಂದವರಿಗೆ ಮಂಗಳೂರು ಪಾಲಿಕೆ ಚುನಾವಣೆ ಟಿಕೆಟ್ ಕೊಟ್ಟ ಕಾಂಗ್ರೆಸ್: ಭುಗಿಲೆದ್ದ ಆಕ್ರೋಶ
ಬುಧವಾರದಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗುಲ್ಜಾರ್ ಬಾನು ಅವರಿಗೆ ಟಿಕೆಟ್ ನಿರಾಕರಿಸಿರುವುದರಿಂದ ಗುಲ್ಜಾರ್ ಬೆಂಬಲಿಗರು ಮಾಜಿ ಶಾಸಕ ಮೊಯ್ದಿನ್ ಬಾವ ಅವರನ್ನು ಮುತ್ತಿಗೆ ಹಾಕಿ ಮಾತಿನ ಚಕಮಕಿ ನಡೆಸಿದ್ದರು. ಈ ವೇಳೆ ಅಜೀಂ, ಮಾಜಿ ಶಾಸಕ ಮೊಯ್ದಿನ್ ಬಾವ ಕೆನ್ನೆಗೆ ಹೊಡೆದು ಹಲ್ಲೆ ಮಾಡಿದ್ದನು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಪೊಲೀಸರು ಅಜೀಂನನ್ನು ಬಂಧಿಸಿದ್ದಾರೆ.