ಬಂಟ್ವಾಳ: ಕೊರೊನಾ ಸಾಂಕ್ರಾಮಿಕ ರೋಗಗಳು ತಡೆಗೆ ವಿಪತ್ತು ನಿರ್ವಹಣೆ ಕಾಯ್ದೆ-2005ರ ಕಲಮಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಚೇರಿಗಳ ಕೆಲವು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಆದೇಶದ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬಂಟ್ವಾಳ ಮಿನಿ ವಿಧಾನಸೌಧದಲ್ಲೂ ಬಹುತೇಕ ಸಾರ್ವಜನಿಕ ಸೇವೆಗಳು ಸ್ಥಗಿತಗೊಂಡಿವೆ.
ಅಗತ್ಯ ಸೇವೆಗಳು ಹಾಗೂ ಕಂದಾಯ ಇಲಾಖೆಯ ಮೂಲಕ ನಡೆಯುತ್ತಿದ್ದ ಜನಸ್ನೇಹಿ ಕೇಂದ್ರ, ಸ್ಪಂದನ ಕೇಂದ್ರ ಮತ್ತು ಆಧಾರ್ ಕೇಂದ್ರಗಳಲ್ಲಿನ ಸೇವೆಗಳು, ಆಧಾರ್ ಸೇವೆ ಒದಗಿಸುತ್ತಿರುವ ಇತರ ಕೇಂದ್ರಗಳಲ್ಲಿನ ಸೇವೆಗಳನ್ನೂ ಮಾರ್ಚ್ 31ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೊರಡಿಸಲಾಗಿದೆ.
ಮಾಹಿತಿ ತಿಳಿಯದ ಕೆಲ ಗ್ರಾಮೀಣ ಪ್ರದೇಶದ ಸಾರ್ವಜನಿಕರು ಮಿನಿವಿಧಾನ ಸೌಧ ಹಾಗೂ ತಾಲೂಕಿನ ಹಲವು ಸರ್ಕಾರಿ ಕಚೇರಿಗಳಿಗೆ ಆಗಮಿಸಿ, ಸೇವೆ ಲಭ್ಯವಿಲ್ಲದ ಕಾರಣ ವಾಪಸ್ ಆಗುತ್ತಿದ್ದ ದೃಶ್ಯಗಳು ಕಂಡುಬಂತು.