ಮಂಗಳೂರು : ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು.
ಮೂಡಬಿದಿರೆಯ ನಾರಾವಿ ಸೈಂಟ್ ಆಂಥೋನಿ ಪಿಯು ಕಾಲೇಜು ವಿದ್ಯಾರ್ಥಿನಿ ಅಂಕಿತಾ ವಾಣಿಜ್ಯ ವಿಭಾಗದಲ್ಲಿ ಶೇ.98 (588) ಅಂಕಗಳನ್ನು ಪಡೆದು ಸಾಧನೆ ಮಾಡಿದ್ದು, ಅವರಿಗೆ ಸಚಿವರು ದೂರವಾಣಿ ಕರೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕರೆ ಬಂದಿರುವುದರಿಂದ ವಿದ್ಯಾರ್ಥಿನಿ ಸಂತಸಗೊಂಡಿದ್ದಾರೆ.
ಜಿಲ್ಲೆಯ ಪಿಯುಸಿ ಮಕ್ಕಳ ಸಾಧನೆಗೆ ಸಚಿವರು ಹರ್ಷ ವ್ಯಕ್ತಪಡಿಸಿದ್ದು, ಇದೇ ರೀತಿ ಸಾಧನೆ ಮಾಡುತ್ತಿರಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಹುರಿದುಂಬಿಸಿದ್ದಾರೆ. ಇದೇ ರೀತಿ ಸಾಧನೆಗೈದ ಇನ್ನೂ ಹಲವಾರು ವಿದ್ಯಾರ್ಥಿಗಳಿಗೆ ಸಚಿವರು ದೂರವಾಣಿ ಕರೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.