ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ.
ಎಪ್ರಿಲ್ 10 ರಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇವರ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗುವುದಾಗಿ ತಿಳಿಸಿದ್ದಾರೆ.