ETV Bharat / state

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ, ಪರಿಶೀಲನೆ - ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇಂದು ಭೇಟಿ ನೀಡಿದರು. ನಂತರ ಕಡಬ ಹಾಗೂ ಸುಳ್ಯ ತಾಲೂಕಿಗೆ ಸಂಬಂಧಿಸಿದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

Minister Kota Srinivasa Poojary
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ
author img

By

Published : Jun 13, 2020, 5:48 PM IST

ಸುಬ್ರಹ್ಮಣ್ಯ: ಲಾಕ್‌ಡೌನ್ ಸಡಿಲಿಕೆ ನಂತರ‌ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ವಿಧಿಗಳು ಆರಂಭವಾದ ನಂತರ ಮೊದಲ ಬಾರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ

ದೇವಸ್ಥಾನಕ್ಕೆ ಭೇಟಿ ನೀಡಿ, ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಸಚಿವರು, ನಂತರ ಕಡಬ ಹಾಗೂ ಸುಳ್ಯ ತಾಲೂಕಿಗೆ ಸಂಬಂಧಿಸಿದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿಯ ಮೀಟಿಂಗ್ ಹಾಲ್‌ನಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಭೆಯಲ್ಲಿ ಸುಳ್ಯ ಶಾಸಕ ಎಸ್ ಅಂಗಾರ, ದೇವಸ್ಥಾನದ ಆಡಳಿತಾಧಿಕಾರಿ ರೂಪಾ ಎಂ.ಜೆ., ಕಡಬ ತಹಶೀಲ್ದಾರ್​ ಜಾನ್ ಪ್ರಕಾಶ್ ರೋಡ್ರಿಗಸ್ಸ್ ಸೇರಿದಂತೆ ಪ್ರಮುಖ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.